ETV Bharat / sitara

ವಿಷ್ಣುವರ್ಧನ್ ಅಭಿಮಾನಿಯಾದ ಸೂಪರ್​ ಸ್ಟಾರ್​​ ಉಪೇಂದ್ರ ಅಣ್ಣನ ಮಗ ನಿರಂಜನ್..!

author img

By

Published : Oct 9, 2021, 4:02 PM IST

ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ, 'ನಮ್ಮ ಹುಡುಗರು' ಸಿನಿಮಾ ಮೂಲಕ ಸಾಹಸ ಸಿಂಹ ವಿಷ್ಣುವರ್ಧನ್​​​​ ಅವರ ಅಭಿಮಾನಿಯಾಗಿ ಬೆಳ್ಳಿ ತೆರೆ ಮೇಲೆ ಮಿಂಚೋದಕ್ಕೆ ರೆಡಿಯಾಗಿದ್ದಾರೆ. ಬಾಲ್ಯದಲ್ಲೇ ವಿಷ್ಣುವರ್ಧನ್ ಅವರ ನಟನೆಯ 'ಬಳ್ಳಾರಿ ನಾಗ' ಚಿತ್ರದಲ್ಲಿ ನಿರಂಜನ್​ ಅಭಿನಯಿಸಿದ್ದರು.

namama-hudugaru-film-song-release
ಡಾ. ವಿಷ್ಣುವರ್ಧನ್ ಅಭಿಮಾನಿಯಾದ ಸೂಪರ್​ ಸ್ಟಾರ್​​ ಉಪೇಂದ್ರ ಅಣ್ಣನ ಮಗ ನಿರಂಜನ್..!

ಕನ್ನಡ ಚಿತ್ರರಂಗದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನಿಯಾಗಿ, ಈಗಾಗಲೇ ಸಾಕಷ್ಟು ಸ್ಟಾರ್ ನಟರು ಸಿಲ್ವರ್ ಸ್ಕ್ರೀನ್ ಮೇಲೆ ರಾರಾಜಿಸಿದ್ದಾರೆ. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ, 'ನಮ್ಮ ಹುಡುಗರು' ಸಿನಿಮಾ ಮೂಲಕ ಸಾಹಸ ಸಿಂಹನ ಅಭಿಮಾನಿಯಾಗಿ ಬೆಳ್ಳಿ ತೆರೆ ಮೇಲೆ ಮಿಂಚೋದಕ್ಕೆ ರೆಡಿಯಾಗಿದ್ದಾರೆ.

ಸದ್ಯ ಟೀಸರ್ ನಿಂದ ಸ್ಯಾಂಡಲ್​ವುಡ್​ನಲ್ಲಿ ಗಮನ ಸೆಳೆಯುತ್ತಿರೋ, 'ನಮ್ಮ‌ ಹುಡುಗರು' ಚಿತ್ರತಂಡ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹಾಡಿರೋ 'ಐ ಲವ್ ಯೂ' ಎಂಬ ಹಾಡನ್ನ ಬಿಡುಗಡೆ ಮಾಡಿತು. ಚಿತ್ರದಲ್ಲಿ ವಿಷ್ಣು ದಾದಾ ಅವರ ಕಟೌಟ್ ನಿಂದ ನಿರಂಜನ್ ಮೇಲೆ ಹೂವಿನ ಹಾರ ಬೀಳುವಂತೆ ಇಂಟ್ರೊಡಕ್ಷನ್ ಸೀನ್ ಮಾಡಲಾಗಿದೆ.

ಬಾಲ್ಯದಲ್ಲೇ ವಿಷ್ಣುವರ್ಧನ್ ಅವರ ನಟನೆಯ 'ಬಳ್ಳಾರಿ ನಾಗ' ಚಿತ್ರದಲ್ಲೇ ನಟಿಸಿದ್ರಂತೆ. ಈಗ ನಮ್ಮ‌ ಹುಡುಗರು ಚಿತ್ರದಲ್ಲಿ ಅವರ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದೇನೆ ಅಂತಾರೆ ನಟ ನಿರಂಜನ್​​​.

ಇನ್ನು ನಿರಂಜನ್​ಗೆ ಜೋಡಿಯಾಗಿ ಮೈಸೂರಿನ ಹುಡುಗಿ ರಾಧ್ಯಾ ಕಾಣಿಸಿಕೊಂಡಿದ್ದಾರೆ. ಇದರ ಜೊತೆಗೆ ಶರತ್ ಲೋಹಿತಾಶ್ವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪ್ರವೀಣ್, ಆಲ್ ಓಕೆ ಅಲೋಕ್ ಮುಂತಾದವರು ನಟಿಸಿದ್ದಾರೆ. ನಿರ್ದೇಶಕ ಆರ್. ಚಂದ್ರು ಬಳಿ ಹಲವು ವರ್ಷಗಳಿಂದ ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಎಚ್.ಬಿ.ಸಿದ್ದು, ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ.

ಅಭಿಮಾನ್ ರಾಯ್ ಸಂಗೀತ. ಕೆ.ಕೆ. ಅಶ್ರಫ್ ಯುವ ಪ್ರತಿಭೆಗಳನ್ನ ಇಟ್ಟುಕೊಂಡು ಈ ಸಿನಿಮಾಕ್ಕೆ ಹಣ ಹೂಡಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರೋ 'ನಮ್ಮ ಹುಡುಗರು' ಚಿತ್ರತಂಡ ಸದ್ಯದಲ್ಲೇ ಟ್ರೇಲರ್ ಬಿಡುಗಡೆ ಮಾಡಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.