ಪುನೀತ್ ರಾಜ್‍ಕುಮಾರ್, ರಚಿತಾ ರಾಮ್ ಹಾಗೂ ಅನುಪಮಾ ಪರಮೇಶ್ವರನ್ ಅಭಿನಯದ 'ನಟಸಾರ್ವಭೌಮ' ಸಿನಿಮಾವನ್ನು ಇನ್ನೂ ನೋಡದಿರುವ ಪುನೀತ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದಿದೆ. 'ನಟಸಾರ್ವಭೌಮ' ಸಿನಿಮಾ ಈ ವಾರ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ.
ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಅಭಿನಯ ಹಾಗೂ ಡ್ಯಾನ್ಸ್ಗೆ ಅಪ್ಪು ಅಭಿಮಾನಿಗಳು ಫುಲ್ ಫಿದಾ ಆಗಿದ್ದರು. ರಾಕ್‍ಲೈನ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪವನ್ ಒಡೆಯರ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದಲ್ಲಿ ಪವರ್ ಸ್ಟಾರ್ ಮೊದಲ ಬಾರಿಗೆ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಉದ್ದಕ್ಕೂ ಸಾಧು ಕೋಕಿಲ ಹಾಗು ಚಿಕ್ಕಣ್ಣ ಕಾಮಿಡಿ ಝಲಕ್ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಿತ್ತು. ಇದಿಷ್ಟೇ ಅಲ್ಲದೆ ಚಿತ್ರದಲ್ಲಿ ಸಾಕಷ್ಟು ಕುತೂಹಲಕಾರಿ ಅಂಶಗಳಿದ್ದು, ಔಟ್ ಅಂಡ್ ಔಟ್ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾ ಆಗಿ ಮೂಡಿಬಂದಿತ್ತು.
ಪುನೀತ್ ರಾಜಕುಮಾರ್ ಹಾಗೂ ಪವನ್ ಒಡೆಯರ್ ಕಾಂಬಿನೇಷನ್‍ನಲ್ಲಿ ಮೂಡಿಬಂದ ಎರಡನೇ ಚಿತ್ರ ಇದಾಗಿದ್ದು, ಈ ಸಿನಿಮಾದಲ್ಲಿ ಬಹುದೊಡ್ಡ ತಾರಾಬಳಗವೇ ಇದೆ. ಅಪ್ಪು ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾರಾಮ್ ಹಾಗೂ ಮಲಯಾಳಿ ಬೆಡಗಿ ಅನುಪಮಾ ಪರಮೇಶ್ವರನ್ ಅಭಿನಯಿಸಿದ್ದರು. ಇವರೊಂದಿಗೆ ರವಿಶಂಕರ್, ಹಿರಿಯ ನಟಿ ಬಿ. ಸರೋಜಾದೇವಿ, ಪ್ರಕಾಶ್ ಬೆಳವಾಡಿ, ಅವಿನಾಶ್ ಹಾಗೂ ಇನ್ನಿತರರು ಸಿನಿಮಾದಲ್ಲಿ ನಟಿಸಿದ್ದಾರೆ. ಮೇ 26ರ ಭಾನುವಾರ ಸಂಜೆ 7 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಸಿನಿಮಾ ಪ್ರಸಾರವಾಗುತ್ತಿದೆ.