ETV Bharat / sitara

ಅಣ್ಣನ ಮಗನ ಹೊಸ‌ ಚಿತ್ರಕ್ಕೆ ಸಾಥ್ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ - new movie of upendras brothers son

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅವರ 'ಹಂಟರ್' ಸಿನಿಮಾದ ಮುಹೂರ್ತಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಚಾಲನೆ ನೀಡಿದರು. ಇದೇ ವೇಳೆ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

new-movie-hunter-upendra-came-for-muhurtham
ಅಣ್ಣ ಮಗ ನಿರಂಜನ್‌ ಹೊಸ‌ ಚಿತ್ರಕ್ಕೆ ಸಾಥ್ ಕೊಟ್ಟ ರಿಯಲ್ ಸ್ಟಾರ್!
author img

By

Published : Feb 21, 2022, 11:55 AM IST

ಬೆಂಗಳೂರು: ನಟ ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಪುತ್ರ ನಿರಂಜನ್ ನಿಧಾನವಾಗಿ ಕನ್ನಡ ಚಿತ್ರರಂಗದಲ್ಲಿ ಅಂಬೆಗಾಲಿಡುತ್ತಿದ್ದಾರೆ. ಸದ್ಯ ನಮ್ಮ ಹುಡುಗರು, ಸೂಪರ್ ಸ್ಟಾರ್ ಹಾಗು ಕ್ಯೂ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಇವರು ಈಗ ಹಂಟರ್ ಆಗಿ ತೆರೆಯ ಮುಂದೆ ಬರಲಿದ್ದಾರೆ.

ಇದು ನಿರಂಜನ್ ಅಭಿನಯದ ಹೊಸ ಸಿನಿಮಾ. ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು.

ಹಂಟರ್ ಸಿನಿಮಾದ ಫಸ್ಟ್‌ ಲುಕ್ ಟೀಸರ್

ಕಾರ್ಯಕ್ರಮಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿದರು. ಬಳಿಕ ಫಸ್ಟ್‌ ಲುಕ್ ಟೀಸರ್ ಅನ್ನು ಉಪೇಂದ್ರ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಉಪೇಂದ್ರ, ನಿಜ ಹೇಳಬೇಕು ಅಂದರೆ, ಎಲ್ಲಾ ಗೊತ್ತು ಅನ್ನುವವರಿಗೆ ಏನೂ ಗೊತ್ತಿರಲ್ಲ. ಏನೂ ಗೊತ್ತಿಲ್ಲ ಅನ್ನುವವರಿಗೆ ಎಲ್ಲಾ ಗೊತ್ತಿರುತ್ತದೆ ಎಂದು ಉಪೇಂದ್ರ ಮಾತು ಆರಂಭಿಸಿದರು. ನಿರ್ಮಾಪಕರು ಸಂಕಷ್ಟ ಚತುರ್ಥಿ ದಿವಸ ಗಣಹೋಮ ಮಾಡಿ ಚಿತ್ರ ಆರಂಭಿಸಿದ್ದಾರೆ, ನಿಜಕ್ಕೂ ಒಳ್ಳೆಯದಾಗುತ್ತದೆ. ನಿರ್ದೇಶಕರಾದಿಯಾಗಿ ಇಡೀ ತಂಡದಲ್ಲಿ ಉತ್ಸಾಹವಿದೆ. ನಿರಂಜನ್ ಬಗ್ಗೆ ಹೇಳುವುದಾದರೆ ಅವನು ಚಿಕ್ಕ ವಯಸ್ಸಿನಲ್ಲೇ ನಟ. ನನ್ನ A ಚಿತ್ರದಲ್ಲಿ ಒಂದು ಚಿಕ್ಕ ಮಗು ಮಲಗಿರುವ ದೃಶ್ಯವಿದೆ. ಆ ಮಗು ನಮ್ಮ ನಿರಂಜನ್. ಆನಂತರ ನಾಟಕ, ಸಿನಿಮಾ ಇದರ ಮೇಲೆ ಅವನ ಆಸಕ್ತಿ ಬೆಳೆಯಿತು. ಅಷ್ಟೇ ಶ್ರಮ ಪಡುತ್ತಾನೆ. ಅವನಿಗೂ ಒಳ್ಳೆಯದಾಗಲಿ ಎಂದರು.

ಪ್ರಿಯಾಂಕ ಉಪೇಂದ್ರ ಅವರು ಚಿತ್ರತಂಡಕ್ಕೆ ತಮ್ಮ ಮಾತುಗಳ ಮೂಲಕ ಶುಭ ಕೋರಿದರು.

ನಂತರ ನಾಯಕ ನಟ ನಿರಂಜನ್ ಸುಧೀಂದ್ರ ಮಾತನಾಡಿ, ಮೊದಲು ನನ್ನ ತಂದೆ, ತಾಯಿ, ಅಜ್ಜಿ, ತಾತ ಹಾಗೂ ಚಿಕ್ಕಪ್ಪ- ಚಿಕ್ಕಮ್ಮನಿಗೆ ಧನ್ಯವಾದ ಹೇಳುತ್ತೇನೆ. ಅದರಲ್ಲೂ ಚಿಕ್ಕಪ್ಪ- ಚಿಕ್ಕಮ್ಮ ನನ್ನ ಎಲ್ಲಾ ಚಿತ್ರಗಳಿಗೂ ನೀಡುತ್ತಿರುವ ಪ್ರೋತ್ಸಾಹ ಮರೆಯುವಂತಿಲ್ಲ. ನಾನು ನಾಯಕನಾಗಿ ನಟಿಸಿರುವ ಯಾವುದೇ ಚಿತ್ರ ತೆರೆಕಂಡಿಲ್ಲ. ಆದರೂ ನನ್ನ ಮೇಲೆ ನಂಬಿಕೆಯಿಟ್ಟು ಅವಕಾಶ ನೀಡಿರುವ‌ ನಿರ್ಮಾಪಕ ತ್ರಿವಿಕ್ರಮ ಅವರಿಗೆ ನಾನು ಆಭಾರಿ. ನಿರ್ದೇಶಕ ವಿನಯ್ ಕೃಷ್ಣ ಅವರ ಕೆಲಸದ ಬಗ್ಗೆ ಎಷ್ಟು ಹೇಳಿದರು ಕಡಿಮೆಯೇ. ಚಂದನ್ ಶೆಟ್ಟಿ ಅವರು ಸಂಗೀತ ನೀಡುತ್ತಿರುವುದರಿಂದ ಎಲ್ಲಾ ಹಾಡುಗಳು ಚಂದವಾಗಿಯೇ ಇರುತ್ತದೆ. ನಾಯಕಿ ಸೌಮ್ಯ ಅವರು ಉತ್ತಮ ಕಲಾವಿದೆ. ಅವರಿಗೆ ಸಿನಿಮಾ ಮುಗಿಯುವಷ್ಟರಲ್ಲಿ ಕನ್ನಡ ಕಲಿಸುತ್ತೇನೆ. ಈ ಚಿತ್ರದಲ್ಲಿ ಮಾಸ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಆದಷ್ಟು ಬೇಗ ಚಿತ್ರೀಕರಣ ಮುಗಿಸಿ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದರು.

ಚಿತ್ರದ ನಾಯಕ ನಟಿ ಸೌಮ್ಯ ಮೆನನ್ ಮಾತನಾಡಿ, ನಾನು ಹಿಂದೆ ಮಲೆಯಾಳಂ ಚಿತ್ರದಲ್ಲಿ ಅಭಿನಯಿಸಿದ್ದೆ. ಕನ್ನಡದಲ್ಲಿ ಮೊದಲ ಚಿತ್ರ. ಕಥೆ ಚೆನ್ನಾಗಿದೆ. ನನ್ನ ಪಾತ್ರ ಕೂಡ ತುಂಬಾ ಚೆನ್ನಾಗಿದೆ ಎಂದು ಹೇಳಿದರು.

ಹಂಟರ್ ಚಿತ್ರವನ್ನ ನಿರ್ದೇಶನ ಮಾಡುತ್ತಿರುವ ವಿನಯ್ ಕೃಷ್ಣ ಮಾತನಾಡಿ, ಪರಿ ಹಾಗೂ ಸೀಜರ್ ಚಿತ್ರದ ನಂತರ ನಮ್ಮ ಸಂಸ್ಥೆಯಲ್ಲಿ ಮೂಡಿಬರುತ್ತಿರುವ ಮೂರನೇ ಚಿತ್ರ ಇದಾಗಿದೆ. ಚಿತ್ರದ ಕಥೆ ಚೆನ್ನಾಗಿದೆ. ನಿರಂಜನ್ ನಾಯಕ ನಟನಾಗಿ ಅಭಿನಯಿಸಿದ್ದಾರೆ. ನಿರಂಜನ್ ಅವರಿಗೆ ನಾಯಕನಿಗಿರಬೇಕಾದ ಎಲ್ಲಾ ಗುಣಗಳಿವೆ ಎಂದು ಹೇಳಿದರು. ಇದು ನನ್ನ ಎರಡನೇ ಚಿತ್ರ. ಈ ಚಿತ್ರ ಎಲ್ಲರಿಗೂ ಹಿಡಿಸಲಿದೆ. ಪ್ರೇಕ್ಷಕರನ್ನು ಕುರ್ಚಿಯ ತುದಿಯಲ್ಲಿ ಕೂರವಂತೆ ಮಾಡುತ್ತದೆ. ನನಗೆ ಕೇಳಿದನ್ನೆಲ್ಲಾ ಕೊಡುವ ನಿರ್ಮಾಪಕರು ಸಿಕ್ಕಿರುವುದು ನನ್ನ ಪುಣ್ಯ. ಕಳೆದ ಆರು ತಿಂಗಳಿಂದ ಈ ಚಿತ್ರಕ್ಕಾಗಿ ನಿರಂಜನ್ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಕೇರಳದ ಸೌಮ್ಯ ಮೆನನ್ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಆಕೆಗೆ ಕನ್ನಡದಲ್ಲಿ ಇದು ಮೊದಲಚಿತ್ರ. ಚಿತ್ರವು ಪ್ರಕಾಶ್ ರಾಜ್, ನಾಜರ್, ಸುಮನ್, ಸಾಧುಲೋಕಿಲ ಮುಂತಾದ ಪ್ರಮುಖ ತಾರಾಗಣವನ್ನು ಹೊಂದಿದೆ. ಚಿತ್ರದ ಹಾಡುಗಳಿಗೆ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಹೇಶ್ ಅವರ ಛಾಯಾಗ್ರಹಣ ಮತ್ತು ಕೆ.ಜಿ.ಎಫ್ ಖ್ಯಾತಿಯ ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ ಎಂದು ಹೇಳಿದ್ದಾರೆ.

ಈ ಚಿತ್ರಕ್ಕೆ ಸಂಗೀತ ನೀಡುತ್ತಿರುವ ಚಂದನ್ ಶೆಟ್ಟಿ ಮಾತನಾಡಿ, ಸೀಜರ್ ಚಿತ್ರದಲ್ಲಿ ನನಗೆ ಮೊದಲ ಅವಕಾಶ ಕೊಟ್ಟವರು ನಿರ್ಮಾಪಕ ತ್ರಿವಿಕ್ರಮ್. ಈಗ ಈ ಚಿತ್ರಕ್ಕೂ ನನ್ನನ್ನೇ ಸಂಗೀತ ನಿರ್ದೇಶಕನಾಗಿ ಆಯ್ಕೆ ಮಾಡಿಕೊಂಡಿರುವುದಕ್ಕೆ ಧನ್ಯವಾದ ಹೇಳಿದರು. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು,ಜಯಂತ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್ ಹಾಗೂ ನಾನು ಕೂಡ ಒಂದು ಹಾಡಿಗೆ ಸಾಹಿತ್ಯವನ್ನು ನೀಡಿದ್ದೇನೆ. ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಅಗತ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ :ದಾದಾಸಾಹೇಬ್​ ಪಾಲ್ಕೆ ಪ್ರಶಸ್ತಿ: 'ಪುಷ್ಪ' ವರ್ಷದ ಸಿನಿಮಾ, ರಣವೀರ್​ ಸಿಂಗ್​ಗೆ ಉತ್ತಮ ನಟ ಗೌರವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.