ನಟ ನಿಖಿಲ್ ಕುಮಾರಸ್ವಾಮಿ ಜೀವನದಲ್ಲಿ ಇಂದು ವಿಶೇಷವಾದ ದಿನ. ಯಾಕೆಂದರೆ, ನಿಖಿಲ್ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ, ದೊಡ್ಡ ಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
-
ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ.
— Nikhil Kumar (@Nikhil_Kumar_k) September 24, 2021 " class="align-text-top noRightClick twitterSection" data="
Love you my son 😘 pic.twitter.com/d8eRPA76ne
">ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ.
— Nikhil Kumar (@Nikhil_Kumar_k) September 24, 2021
Love you my son 😘 pic.twitter.com/d8eRPA76neನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ.
— Nikhil Kumar (@Nikhil_Kumar_k) September 24, 2021
Love you my son 😘 pic.twitter.com/d8eRPA76ne
ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುವ ನಿಖಿಲ್ ಕುಮಾರಸ್ವಾಮಿ, ತಮ್ಮ ಮುದ್ದಿನ ಮಗನ ಫೊಟೋವನ್ನ ಹಂಚಿಕೊಂಡಿದ್ದಾರೆ. ಅಲ್ಲದೆ, ಮೊದಲ ರಿಯಾಕ್ಷನ್ ನೀಡಿದ್ದಾರೆ. 'ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಲವ್ ಯು ಮೈ ಸನ್' ಎಂದು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

ಮರಿ ಮೊಮ್ಮಗ ಹುಟ್ಟಿರೋ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಪತ್ನಿ ಚೆನ್ನಮ್ಮ ಜೊತೆ ಆಸ್ಪತ್ರೆಗೆ ಬಂದು ನಿಖಿಲ್ ಅವರ ಪುತ್ರನನ್ನ ನೋಡಿ ಖುಷಿ ಪಟ್ಟಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಕೂಡ ಆಸ್ಪತ್ರೆಗೆ ಬಂದು ಮೊಮ್ಮಗನನ್ನ ಎತ್ತಿ ಮುದ್ದಾಡುವ ಮೂಲಕ ತಾತನಾದ ಸಂಭ್ರಮದಲ್ಲಿದ್ದಾರೆ. ಹೆಚ್ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿಯೂ ಮೊಮ್ಮಗನನ್ನ ನೋಡಿ ಆನಂದಿಸಿದ್ದಾರೆ.

'ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ' ಎಂದು ಹೆಚ್ ಡಿ ಕುಮಾರಸ್ವಾಮಿ ಸೋಷಿಯಲ್ ಮೀಡಿಯಾಲ್ಲಿ ಬರೆದುಕೊಂಡಿದ್ದಾರೆ.
2020ರ ಏಪ್ರಿಲ್ನಲ್ಲಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್ಡೌನ್ ನಿಯಮಗಳ ಅನುಸಾರ ಅದ್ದೂರಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್ಹೌಸ್ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಓದಿ: ಅಕ್ಟೋಬರ್ 1ರಿಂದ ಮಕ್ಕಳ ಜೊತೆಗೆ ಧರಣಿ ಕೂರುವೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ