ETV Bharat / sitara

ಕಮರ್ಷಿಯಲ್ ಚಿತ್ರ ಬಿಟ್ಟು ಸಂದೇಶ ಸಾರುವ ಚಿತ್ರದೊಂದಿಗೆ ಬಂದ್ರು ಓಂಸಾಯಿ ಪ್ರಕಾಶ್ - Bangalore Chamundeshwari studio

ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆಯೊಂದೇ ಕಾರಣವಲ್ಲ ಎಂದು ಸಾರುವ 'ಸೆಪ್ಟೆಂಬರ್ 10' ಸಿನಿಮಾ ಶೀಘ್ರದಲ್ಲೆ ಬಿಡುಗಡೆಯಾಗಲಿದೆ. ಚಿತ್ರವನ್ನು ಓಂ ಸಾಯಿ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿದ್ದು ಸಿನಿಮಾ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.

Om sai prakash
'ಸೆಪ್ಟೆಂಬರ್ 10'
author img

By

Published : Mar 2, 2021, 6:43 PM IST

ಓಂ ಸಾಯಿ ಪ್ರಕಾಶ್, ಕನ್ನಡ ಚಿತ್ರರಂಗದಲ್ಲಿ ಫ್ಯಾಮಿಲಿ ಸೆಂಟಿಮೆಂಟ್ ಸಿನಿಮಾಗಳ ಮೂಲಕ ಸ್ಟಾರ್ ನಿರ್ದೇಶಕರಾಗಿ ಮೆರೆದವರು.ಇದೀಗ ಮೊದಲ ಬಾರಿಗೆ ಸಾಮಾಜಿಕ ಸಂದೇಶ ಇರುವ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ 'ಸೆಪ್ಟೆಂಬರ್ 10' ಎಂದು ಟೈಟಲ್ ಇಡಲಾಗಿದೆ. ಸೆಪ್ಟೆಂಬರ್ 10 ನ್ನು ವಿಶ್ವ ಆತ್ಮಹತ್ಯೆ ನಿವಾರಣಾ ದಿನವೆಂದು ಘೋಷಿಸಲಾಗಿದೆ. ಕ್ಷುಲ್ಲಕ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಲು ಪ್ರಯತ್ನಿಸುವ ಅನೇಕ ವಿಚಾರಗಳನ್ನು ಈ ಚಿತ್ರದಲ್ಲಿ ಹೇಳಲಾಗಿದೆ.

Om sai prakash
'ಸೆಪ್ಟೆಂಬರ್ 10'

ಹೆಚ್ಚಾಗುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ತೆಲಂಗಾಣದ ಕ್ಯಾಪ್ಟನ್ ಜಿ.ಜಿ.ರಾವ್ ಒಂದು ಪುಸ್ತಕವನ್ನು ಬರೆದಿದ್ದರು. ಇದೇ ಪುಸ್ತಕವನ್ನು ಆಧಾರವಾಗಿಟ್ಟುಕೊಂಡು ಸಾಯಿಪ್ರಕಾಶ್ 'ಸೆಪ್ಟೆಂಬರ್ 10' ಚಿತ್ರ ನಿರ್ದೇಶನ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರ ಮನಸ್ಥಿತಿ ಹೇಗಿರುತ್ತದೆ..? ಎಲ್ಲದಕ್ಕೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ, ಸಂದರ್ಭವನ್ನು ಧೈರ್ಯದಿಂದ ಎದುರಿಸಿದರೆ ಖಂಡಿತ ಗೆಲುವು ಸಿಗುತ್ತದೆ ಎಂದು ಹೇಳುವ ಚಿತ್ರ ಇದಾಗಿದೆ. ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನೆರವೇರಿತು. ನಿರ್ದೇಶಕ ಸಾಯಿಪ್ರಕಾಶ್, ತಮ್ಮ ಶ್ರೀದೇವಿ ಫಿಲ್ಮ್ಸ್​ ಬ್ಯಾನರ್​ ಮೂಲಕ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಮೂಲಕ ನಿರ್ಮಾಣಕ್ಕೂ ಇಳಿದಿದ್ದಾರೆ ಸಾಯಿ ಪ್ರಕಾಶ್.

Om sai prakash
ನಿರ್ದೇಶಕ ಓಂಸಾಯಿ ಪ್ರಕಾಶ್

ಇದನ್ನೂ ಓದಿ: 'ಈ ಬಾರಿ ಕೊಟ್ಟಿರೋ ಗಿಫ್ಟ್​ ದೊಡ್ಡದು ಅಂತಾ ನಾ ತಿಳ್ಕೊಂಡಿದ್ದೀನಿ'

"ಹಿರಿಯ ನಟ ಶಶಿಕುಮಾರ್ ಈ ಚಿತ್ರದಲ್ಲಿ ಮನೋವೈದ್ಯರಾಗಿ ಪಾತ್ರ ನಿರ್ವಹಿಸುವ ಮೂಲಕ ಚಿತ್ರರಂಗಕ್ಕೆ ರೀ ಎಂಟ್ರಿಯಾಗಿದ್ದಾರೆ. ಈವರೆಗೆ ಸಾಕಷ್ಟು ಸೆಂಟಿಮೆಂಟ್, ಕಮರ್ಷಿಯಲ್, ಕಾಮಿಡಿ ಚಿತ್ರಗಳನ್ನು ಮಾಡಿದ್ದೇನೆ. ಈ ಬಾರಿ ಜಾಗೃತಿ ಮೂಡಿಸುವ ಚಿತ್ರ ನಿರ್ಮಿಸಿದ್ದೇನೆ. ಸಾಲದ ಹೊರೆಯಿಂದ ರೈತರು, ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳು, ಹಿರಿಯರ ವಿರೋಧ ಎದುರಿಸಲಾರದ ಪ್ರೇಮಿಗಳು, ಕುಟುಂಬದ ಹೊರೆ ತಾಳಲಾಗದವರು, ಸಾಲದ ಬಾಧೆಯಿಂದ ಬೇಸತ್ತವರು, ಇಂಥವರೆಲ್ಲ ದುಡುಕಿನಿಂದ ಆತ್ಮಹತ್ಯೆ ನಿರ್ಧಾರ ಕೈಗೊಳ್ಳುವುದು ತಪ್ಪು ಎಂದು ಹೇಳಲು ಪ್ರಯತ್ನಿಸಿದ್ದೇನೆ. ನಮ್ಮ ಚಿತ್ರ ನೋಡಿ ನೂರರಲ್ಲಿ ಒಬ್ಬರಾದರೂ ತಮ್ಮ ನಿರ್ಧಾರ ಬದಲಿಸಿಕೊಂಡರೆ ನಮ್ಮ ಶ್ರಮ ಸಾರ್ಥಕ" ಎಂದು ಸಾಯಿಪ್ರಕಾಶ್ ಹೇಳಿದ್ದಾರೆ.

Om sai prakash
ಸಾಮಾಜಿಕ ಸಂದೇಶ ಸಾರುವ 'ಸೆಪ್ಟೆಂಬರ್ 10'

ಚಿತ್ರದಲ್ಲಿ ಹಿರಿಯನಟ ರಮೇಶ್‌ಭಟ್ ವಕೀಲನ ಪಾತ್ರ ನಿರ್ವಹಿಸಿದರೆ, ಬಿ.ಜಿ.ರವೀಂದ್ರನಾಥ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸಿಹಿಕಹಿ ಚಂದ್ರು ಮುಸ್ಲಿಂ ಮುಖಂಡರಾಗಿ, ಚರ್ಚ್ ಫಾದರ್ ಆಗಿ ಶಿವಕುಮಾರ್ ಹಾಗೂ ಸ್ಥಿತಿವಂತ ರೈತನ ಪಾತ್ರದಲ್ಲಿ ಗಣೇಶರಾವ್ ಕೇಸರ್‌ಕರ್ ನಟಿಸಿದ್ದಾರೆ. ಯುವ ಪ್ರೇಮಿಗಳಾಗಿ ಜಯಸಿಂಹ ಹಾಗೂ ಆರಾಧ್ಯ ನಟಿಸಿದ್ದಾರೆ. ಉಳಿದಂತೆ ಶ್ರೀರಕ್ಷಾ, ತನುಜಾ, ಜಯಸಿಂಹ, ಮುರಳೀಧರ್, ಅನಿತಾರಾಣಿ, ಮೀಸೆ ಅಂಜನಪ್ಪ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.