ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೈಲಾನ್ ಗ್ಯಾಂಗ್‌ನಲ್ಲಿರೋ ಪೋಸ್ಟರ್ ಇದಾಗಿದ್ದು, ಈ ಪಾತ್ರವನ್ನು ಸುನೀಲ್ ಶೆಟ್ಟಿ ನಿರ್ವಹಿಸಿದ್ದಾರೆ.
ಬಿಳಿ ಪಂಚೆ ಹಾಗೂ ಬಿಳಿ ಅಂಗಿ ತೊಟ್ಟು ರಗಡ್ ಲುಕ್‌ನಲ್ಲಿ ಸುನೀಲ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇನ್ನೂ ವಿಶೇಷ ಅಂದರೆ, ಇದು ಸುನೀಲ್ ಶೆಟ್ಟಿ ನಟನೆಯ ಮೊದಲ ಕನ್ನಡ ಸಿನಿಮಾವಾಗಿದೆ.ಮೂಲತಃ ಕರ್ನಾಟಕದವರಾಗಿರುವ ಸುನೀಲ್ ಶೆಟ್ಟಿ ಬಾಲಿವುಡ್‌ನಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಸುದೀಪ್ ಈ ಸಿನಿಮಾಗಾಗಿ ಅವರನ್ನು ಕನ್ನಡಕ್ಕೆ ಕರೆ ತಂದಿದ್ದಾರೆ.

ಅಕಾಂಕ್ಷ ಸಿಂಗ್ ಸಿನಿಮಾದ ನಾಯಕಿಯಾಗಿದ್ದು, ಅರ್ಜುನ್ ಜನ್ಯ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. 'ಹೆಬ್ಬುಲಿ' ನಂತರ ಕೃಷ್ಣ, ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಸದ್ಯ ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಮಾಡುತ್ತಿದೆ.