ETV Bharat / sitara

ನಿರ್ದೇಶಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಪೊಲೀಸರ​ ನೋಟಿಸ್​ - ನಿರ್ದೇಶಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಪೊಲೀಸ್​ ನೋಟಿಸ್​

ಮನೆಕೆಲಸದವಳ ಮೇಲೆ‌ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಪತ್ನಿ, ಮಗ ಹಾಗೂ ಇತರ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

police-notice-for-director-wife-and-son-in-assault-case
ಹಲ್ಲೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಕ ಸೌಂದರ್ಯ ಜಗದೀಶ್ ಕುಟುಂಬಕ್ಕೆ ಪೊಲೀಸರ​ ನೋಟಿಸ್​
author img

By

Published : Oct 25, 2021, 11:22 AM IST

ಬೆಂಗಳೂರು: ಪಕ್ಕದ ಮನೆಯ ಮನೆಕೆಲಸದವಳ ಮೇಲೆ‌ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಪತ್ನಿ ಹಾಗೂ ಮಗ ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಕುಟುಂಬಸಮೇತ ನಾಪತ್ತೆಯಾಗಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಜಾಮೀನುರಹಿತ ಪ್ರಕರಣ ದಾಖಲಿಸಿರುವ ಪೊಲೀಸರು ಸೌಂದರ್ಯ ಜಗದೀಶ್ ಪತ್ನಿ ರೇಖಾ, ಮಗ ಸ್ನೇಹಿತ್​​ಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿದ್ದಾರೆ. ಹಲ್ಲೆ ಸಂಬಂಧ ನಿಮ್ಮ ವಿರುದ್ಧ ದೂರು ದಾಖಲಾಗಿದೆ. ದೂರಿ‌ನ ಬಗ್ಗೆ ವಿವರಣೆ ನೀಡುವಂತೆ ಸೌಂದರ್ಯ ಜಗದೀಶ್ ಮನೆಗೆ ನೋಟಿಸ್ ನೀಡಿ, ಮೊಬೈಲ್ ಮೂಲಕ ವಿಚಾರ ತಿಳಿಸಿದ್ದಾರೆ. ಅಲ್ಲದೆ ಪೊಲೀಸರು ದೂರುದಾರರ ಮನೆಯ ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಹಲ್ಲೆ ನಡೆದ ಸ್ಥಳ, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದು, ಹಲ್ಲೆಗೆ ಒಳಗಾದವರಿಂದ ಮಾಹಿತಿ ಪಡೆದಿದ್ದಾರೆ.

ಪ್ರಕರಣವೇನು?

ಮನೆಕೆಲಸ ಮಾಡುವ ಮಹಿಳೆ ಅನುರಾಧ ನೀಡಿದ ದೂರಿನ ಮೇರೆಗೆ ರೇಖಾ ಜಗದೀಶ್, ಮಗ ಸ್ನೇಹಿತ್, ಮನೆಯ ಬೌನ್ಸರ್​​ಗಳಾದ ನಿಖಿಲ್, ಕುಮಾರ್, ರೋಹಿತ್ ಹಾಗೂ ಅಶೋಕ್ ಸೇರಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಸೌಂದರ್ಯ ಜಗದೀಶ್ ಮನೆಯ ಪಕ್ಕದ ಮನೆಯೊಂದರಲ್ಲಿ ಅನುರಾಧ, ಕಳೆದ ಎರಡು ವರ್ಷಗಳಿಂದ ಮನೆ ಕೆಲಸ ಮಾಡಿ ತಾಯಿಯೊಂದಿಗೆ ವಾಸ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಕಸ ಗುಡಿಸುವ ವಿಚಾರಕ್ಕಾಗಿ ಸ್ನೇಹಿತ್ ಹಾಗೂ ಆತನ ಸ್ನೇಹಿತರು ಗಲಾಟೆ ತೆಗೆದಿದ್ದಾರೆ. ಆಗ ಅನುರಾಧ ಮತ್ತು ಸ್ನೇಹಿತ್​ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಮನೆ ಕೆಲಸದವಳ ಮೇಲೆ ಸ್ಯಾಂಡಲ್​ವುಡ್​ ಖ್ಯಾತ ನಿರ್ಮಾಪಕರ ಪುತ್ರನಿಂದ ಹಲ್ಲೆ: ಆರೋಪಿಗಳು ಪರಾರಿ

ಕೆಲ ಹೊತ್ತಿನ ಬಳಿಕ ಸೌಂದರ್ಯ ಜಗದೀಶ್ ಹಾಗೂ ಬೌನ್ಸರ್​ಗಳು ಮನೆ ಬಳಿ ಬಂದು ಮತ್ತೆ ಗಲಾಟೆ ತೆಗೆದಿದ್ದಾರೆ. ರೇಖಾ ಜಗದೀಶ್, ಇತರರು ತನ್ನ ಜೊತೆ ವಾಗ್ವಾದಕ್ಕೆ ಇಳಿದು, ವಿವಸ್ತ್ರಗೊಳಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ ತನ್ನ ತಾಯಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಅನುರಾಧ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೊಲೀಸರ ಮೇಲೆ ಆರೋಪ:

ಜಾಮೀನು ರಹಿತ ಕಲಂ ಹಾಕಿದ್ಧರೂ ಕೂಡ ಪೊಲೀಸರು ಆರೋಪಿಗಳಿಗೆ ಕೇವಲ ನೋಟಿಸ್ ನೀಡಿ ಸುಮ್ಮನಾಗಿದ್ದಾರೆ ಎಂಬ ಆರೋಪ ಕೇಳಿಬಂದಿವೆ. ನಿರ್ಮಾಪಕರು ಹಾಗೂ ಸ್ನೇಹಿತರಿಂದ ಕರೆ ಮಾಡಿಸಿ ಬಂಧಿಸದಂತೆ ಪೊಲೀಸರಿಗೆ ಆರೋಪಿಗಳು ಪ್ರಭಾವ ಬೀರುತ್ತಿದ್ದಾರೆ.‌ ಇನ್ನೊಂದೆಡೆ ರಾಜಿ ಆಗುವಂತೆ ದೂರುದಾರರಿಗೆ ಫೋನ್ ಕರೆ ಮಾಡುತ್ತಿದ್ದಾರೆ‌ ಎನ್ನಲಾಗಿದೆ.

ಹಲ್ಲೆಗೆ ಒಳಗಾದ ಮಹಿಳೆಯ ಮನೆ ಮಾಲೀಕರಾದ ಮಂಜುಳಾ ಪುರುಷೋತ್ತಮ್​ಗೆ ಕೆಲ ನಿರ್ಮಾಪಕರು ಮತ್ತು ಸ್ಟಾರ್ ನಟರು, ಗಲಾಟೆ ದೊಡ್ಡದು ಮಾಡದಂತೆ ರಾಜಿ ಪಂಚಾಯತಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಘಟನೆ ನಡೆದು ಎರಡು ದಿನವಾದರೂ ಆರೋಪಿಗಳನ್ನು ಬಂಧಿಸದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.