ಸ್ಯಾಂಡಲ್ವುಡ್ನಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ಸಿನಿಮಾ ಡಾಲಿ ಧನಂಜಯ್ ಅಭಿನಯದ 'ಪಾಪ್ ಕಾರ್ನ್ ಮಂಕಿ ಟೈಗರ್' ಚಿತ್ರ ತಂಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದೆ. ಇದೇ ವಾರ ಸಿನಿಮಾದ ಟೀಸರ್ ರಿಲೀಸ್ ಮಾಡಲಿದೆಯಂತೆ.

ಸಿನಿಮಾದಲ್ಲಿ ಡಾಲಿ ಅಭಿನಯ ಅಭಿಮಾನಿಗಳನ್ನು ಹುಚ್ಚೆಬ್ಬಿಸುವ ರೀತಿ ಇದೆ ಎಂದು ಚಿತ್ರ ತಂಡದ ಮೂಲಗಳು ತಿಳಿಸಿವೆ. ಅಲ್ಲದೆ ಈ ಸಿನಿಮಾಕ್ಕೆ ಸೂರಿ ನಿರ್ದೇಶನವಿದ್ದು, ಡಾಲಿ ಧನಂಜಯ್ ವಿಶೇಷ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ.

ಸುಧೀರ್ ಕೆ ಎಮ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಟೀಸರ್‌ನ ಪುನೀತ್ ರಾಜ್ ಕುಮಾರ್ ಒಡೆತನದ ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಲಾಂಚ್ ಮಾಡಲು ನಿರ್ಧಾರ ಮಾಡಲಾಗಿದೆಯಂತೆ. ಟೀಸರ್‌ನ ಅಪ್ಪು ಅವರಿಂದಲೇ ಲಾಂಚ್ ಮಾಡಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.