ನವದೆಹಲಿ : ಪೋರ್ನ್ ವಿಡಿಯೋ ದಂಧೆ ಪ್ರಕರಣದಲ್ಲಿ ಬಾಲಿವುಡ್ ನಟಿ ಮತ್ತು ರೂಪದರ್ಶಿ ಶೆರ್ಲಿನ್ ಚೋಪ್ರಾಗೆ ಬಂಧನದಿಂದ ಸುಪ್ರೀಂಕೋರ್ಟ್ ರಕ್ಷಣೆ ನೀಡಿದೆ. ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಾಂಬೆ ಹೈಕೋರ್ಟ್ ನಟಿಗೆ ನಿರೀಕ್ಷಣಾ ಜಾಮೀನು ತಿರಸ್ಕಾರ ಮಾಡಿದ್ದರಿಂದ ಈ ಆದೇಶ ಪ್ರಶ್ನೆ ಮಾಡಿ ಚೋಪ್ರಾ ಮೇಲ್ಮನವಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ. ಜೊತೆಗೆ ಅರ್ಜಿದಾರರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.
ಈ ಹಿಂದೆ ಕೂಡ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮತ್ತು ನಟಿ ಪೂನಂ ಪಾಂಡೆಗೆ ರಕ್ಷಣೆ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಚೋಪ್ರಾಗೆ ರಕ್ಷಣೆ ನೀಡಲಾಗಿದ್ದು, ಇವರ ಪರವಾಗಿ ವಕೀಲ ಸುನೀಲ್ ಫರ್ನಾಂಡಿಸ್ ವಾದ ಮಂಡನೆ ಮಾಡಿದ್ದರು.
PAK vs AUS : 24 ವರ್ಷದ ನಂತರ ಪಾಕ್ ಪ್ರವಾಸ ಕೈಗೊಳ್ಳಲಿದೆ ಆಸೀಸ್.. ಮಾರ್ಚ್ 4ರಿಂದ ಸರಣಿ ಶುರು
ಕಳೆದ ಡಿಸೆಂಬರ್ ತಿಂಗಳಲ್ಲಿ ಅಶ್ಲೀಲ ವಿಡಿಯೋ ತಯಾರಿಸಿದ ಆರೋಪದ ಮೇಲೆ ರಾಜ್ ಕುಂದ್ರಾ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿತ್ತು. ಇದಾದ ಬಳಿಕ ಅವರನ್ನ ಜಾಮೀನು ಮೇಲೆ ರಿಲೀಸ್ ಮಾಡಲಾಗಿದೆ.