ETV Bharat / sitara

ಏಕಕಾಲಕ್ಕೆ 3 ಭಾಷೆಗಳಲ್ಲಿ ಪ್ರಜ್ವಲ್ ಅಭಿನಯದ 'ಮಾಫಿಯಾ' ಟೀಸರ್ ಬಿಡುಗಡೆ - ಅದಿತಿ ಪ್ರಭುದೇವ

ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ 'ಮಾಫಿಯಾ' ಚಿತ್ರ ನಿರ್ಮಾಣವಾಗುತ್ತಿದೆ‌. ಗಣರಾಜ್ಯೋತ್ಸವದಂದು ಏಕಕಾಲಕ್ಕೆ ಚಿತ್ರದ ಟೀಸರ್ ಮೂರೂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

prajwal-devaraj-starrer-mafia-movie-teaser-released
'ಮಾಫಿಯಾ' ಟೀಸರ್ ಬಿಡುಗಡೆ
author img

By

Published : Jan 27, 2022, 4:07 AM IST

ಟೈಟಲ್​​ನಿಂದಲೇ ಕನ್ನಡ‌ ಹಾಗೂ ಸೌತ್ ಸಿನಿಮಾ ರಂಗದಲ್ಲಿ ಸೌಂಡ್ ಮಾಡುತ್ತಿರುವ ಸಿನಿಮಾ 'ಮಾಫಿಯಾ'. ಅರ್ಜುನ್ ಗೌಡ ಸಿನಿಮಾ ಬಳಿಕ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೊಲೀಸ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ‌. ಗಣರಾಜ್ಯೋತ್ಸವದಂದು ಏಕಕಾಲಕ್ಕೆ ಚಿತ್ರದ ಟೀಸರ್ ಮೂರೂ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಧ್ರುವ ಸರ್ಜಾ, ಸತೀಶ್ ನೀನಾಸಂ ಹಾಗೂ ರಿಷಬ್ ಶೆಟ್ಟಿ, ತೆಲುಗಿನಲ್ಲಿ ಸುಧೀರ್ ಬಾಬು ಮತ್ತು ರಾಜಶೇಖರ್ ಹಾಗೂ ತಮಿಳಿನಲ್ಲಿ ಸತ್ಯರಾಜ್, ವೆಂಕಟ್ ಪ್ರಭು, ಪಾರ್ಥಿಬನ್ ಹಾಗೂ ನಿರ್ದೇಶಕ ಶಿಶೀಂದ್ರನ್ ಮಾಫಿಯಾ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

'ಮಾಫಿಯಾ' ಟೀಸರ್

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಪ್ರಜ್ವಲ್ ದೇವರಾಜ್​ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ದೇವರಾಜ್ ಅವರು ಸಹ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಧುಕೋಕಿಲ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ. ಜಯಮ್ಮನ ಮಗ ಹಾಗೂ ರಜನಿಕಾಂತ್ ಚಿತ್ರಗಳಿಗೆ ಕೆಲಸ ಮಾಡಿ, ಮಮ್ಮಿ ಹಾಗೂ ದೇವಕಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಲೋಹಿತ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ನಿರ್ಮಿಸುತ್ತಿರುವ, 'ಮಾಫಿಯಾ' ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಷ್ಟೇ ಅಲ್ಲದೇ ಚಿತ್ರದ ಆಡಿಯೋ ಹಕ್ಕು ಸಹ ಆನಂದ್ ಆಡಿಯೋಗೆ ಭಾರಿ ಮೊತ್ತಕ್ಕೆ ಮಾರಾಟವಾಗಿದೆ.

Prajwal Devaraj starrer Mafia Movie Teaser Released
'ಮಾಫಿಯಾ' ಪೋಸ್ಟರ್​

ತರುಣ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಸದ್ಯ ಪ್ರಜ್ವಲ್ ದೇವರಾಜ್ ನಟನೆಯ ಮಾಫಿಯಾ ಚಿತ್ರದ ಟೀಸರ್​ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: ಜೇಮ್ಸ್ ಚಿತ್ರದ ಹೊಸ ಪೋಸ್ಟರ್ ರಿವೀಲ್: ಪವರ್ ಸ್ಟಾರ್ ಅಭಿಮಾನಿಗಳು ಫಿದಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.