ರಾಜ್ಯದಲ್ಲಿ ಕಂಡು ಕೇಳರಿಯದ ಪ್ರವಾಹಕ್ಕೆ ತತ್ತರಿಸಿರುವ ನೆರೆ ಸಂತ್ರಸ್ತರ ಸಹಾಯಕ್ಕೆ ಮುಂದಾಗಿರುವ ಸಂಸದ ಪ್ರತಾಪ್ ಸಿಂಹ ಇದೀಗ ನೂತನ ಕಾರ್ಯಕ್ಕೆ ಕೈ ಹಾಕಿದ್ದಾರೆ.
ಹೌದು, ರಾಜ್ಯದಲ್ಲಿ ಪ್ರವಾಹದಿಂದ ತತ್ತರಿಸಿ ಹೋಗಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗವಹಿಸುತ್ತಿದ್ದಾರೆ.
- — Pratap Simha (@mepratap) September 3, 2019 " class="align-text-top noRightClick twitterSection" data="
— Pratap Simha (@mepratap) September 3, 2019
">— Pratap Simha (@mepratap) September 3, 2019
ಜನಪರ ಕೆಲಸಗಳ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗುತ್ತಿರುವ ಯುವ ಸಂಸದರು, ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಉತ್ಸುಕತೆ ತೋರುತ್ತಿದ್ದಾರೆ. ಅಲ್ಲದೇ, ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿರುವುದಾಗಿ ಸಂಸದರು ಅಭಿಪ್ರಾಯಪಟ್ಟಿದ್ದಾರೆ.
ಕನ್ನಡದ ಕೋಟ್ಯಧಿಪತಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಇದರಲ್ಲಿ ಗೆದ್ದ ಹಣವನ್ನು ಮುಖ್ಯಮಂತ್ರಿಗಳ ಸಂತ್ರಸ್ತರ ನಿಧಿಗೆ ಕೊಡಲು ನಿರ್ಧರಿಸಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕನ್ನಡದ ಕೋಟ್ಯಧಿಪತಿಯ ಶನಿವಾರ, ಭಾನುವಾರ ಅಂದರೆ ಸೆಪ್ಟೆಂಬರ್ 7, 8ರ ಎಪಿಸೋಡ್ನಲ್ಲಿ ಯುವ ಸಂಸದರು ಕಾಣ ಸಿಗಲಿದ್ದಾರೆ.