ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ತುತ್ತಾಗಿದ್ದ ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಹಸ್ತ ಚಾಚಿದರು. ಈ ಸಾಲಿನಲ್ಲಿ ಹೊಂಬಾಳೆ ಫಿಲ್ಮ್ ಸಂಸ್ಥೆಯ ಕೊಡುಗೆ ಜಾಸ್ತಿನೇ ಇದೆ.ಇದೀಗ ಕರ್ನಾಟಕ ಚಲನಚಿತ್ರ ಸಹ ಕಲಾವಿದರಿಗೆ ನಿರ್ಮಾಪಕ ವಿಜಯ್ ಕಿರಗಂದೂರು ನೆರವಾಗಿದ್ದಾರೆ.
ನಿರ್ಮಾಪಕ ವಿಜಯ್ ಕಿರಗಂದೂರು ಕರ್ನಾಟಕ ಚಲನಚಿತ್ರ ಸಹ ಕಲಾವಿದರ ಹಾಗೂ ಪ್ರತಿನಿಧಿಗಳ ಸಂಘಕ್ಕೆ ನಾಲ್ಕು ಲಕ್ಷ ರೂಪಾಯಿ ಸಹಾಯ ಮಾಡಿದ್ದಾರೆ. ಈ ಹಣದಿಂದ ಸುಮಾರು 600 ಜನರಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು ಹಾಗೂ ಸಾರಿಗೆ ಭತ್ಯೆ ಎಂದು 200 ರೂಪಾಯಿ ನೀಡಲಾಯಿತು ಎಂದು ಕರ್ನಾಟಕ ಸಹ ಕಲಾವಿದರ ಸಂಘದ ಖಜಾಂಚಿ ದಿವಾಕರ್ ಆರಗ ತಿಳಿಸಿದ್ದಾರೆ.
ನಮ್ಮ ಸಂಘದ ಸದಸ್ಯರ ಸಂಕಷ್ಟಕ್ಕೆ ಮಿಡಿದ ವಿಜಯ್ ಕಿರಗಂದೂರು ಅವರಿಗೆ ಹಾಗೂ ಸಹಕಾರ ನೀಡಿದ್ದ ಕರ್ನಾಟಕ ಚಲನಚಿತ್ರ ಕಾರ್ಮಿಕರ, ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟದ ಅಧ್ಯಕ್ಷರಾದ ಸಾ.ರಾ.ಗೋವಿಂದು, ಕಾರ್ಯದರ್ಶಿ ರವೀಂದ್ರನಾಥ್ ಹಾಗೂ ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಅವರಿಗೆ ಸಂಫದ ಎಲ್ಲ ಸದಸ್ಯರ ಪರವಾಗಿ ದಿವಾಕರ್ ಅರಗ ತುಂಬು ಹೃದಯದ ಧನ್ಯವಾದ ತಿಳಿಸಿದ್ದಾರೆ.