'ಪ್ರೇಮದ ಕಾಣಿಕೆ' ಸಿನಿಮಾ ತೆರೆಕಂಡ ನಂತರ ಪುನೀತ್ 'ಸನಾದಿ ಅಪ್ಪಣ್ಣ' ಚಿತ್ರದಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದರು. ನಂತರದಲ್ಲಿ ತಾಯಿಗೆ ತಕ್ಕ ಮಗ, ವಸಂತ ಗೀತಾ, ಭೂಮಿಗೆ ಬಂದ ಭಗವಂತ, ಭಾಗ್ಯವಂತ, ಹೊಸ ಬೆಳಕು ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಬಾಲ ಕಲಾವಿದನಾಗಿ ಪುನೀತ್ ಅದ್ಭುತವಾಗಿ ನಟಿಸಿದ್ದರು. ಈ ಸಮಯದಲ್ಲಿ ಪುನೀತ್ ಮಾಸ್ಟರ್ ಲೋಹಿತ್ ಆಗಿ ಪರಿಚಯಗೊಂಡಿದ್ದರು.
1985ರಲ್ಲಿ ತೆರೆಕಂಡ ಬೆಟ್ಟದ ಹೂವು ಚಿತ್ರಕ್ಕಾಗಿ ಪುನೀತ್‌ಗೆ ರಾಷ್ಟ್ರಪ್ರಶಸ್ತಿ ಒಲಿದು ಬಂದಿತ್ತು. ಚಲಿಸುವ ಮೋಡಗಳು ಹಾಗೂ ಎರಡು ಕನಸು ಚಿತ್ರದಲ್ಲಿ ಪುನೀತ್ ನಟನೆಗೆ ಅತ್ಯುತ್ತಮ ಬಾಲ ನಟ ಪ್ರಶಸ್ತಿ ಕೂಡ ದೊರೆತಿತ್ತು.
2002ರಲ್ಲಿ ತೆರೆ ಕಂಡ ಅಪ್ಪು ಸಿನಿಮಾ ಮೂಲಕ ಪುನೀತ್ ಪೂರ್ಣ ಪ್ರಮಾಣದ ನಟನಾಗಿ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದರು. ಅಲ್ಲಿಂದ ಈವರೆಗೆ ಸುಮಾರು 25 ಸಿನಿಮಾಗಳಲ್ಲಿ ಪುನೀತ್ ನಟಿಸಿದ್ದಾರೆ. ಪ್ರೇಮದ ಕಾಣಿಕೆ ಸಿನಿಮಾ ತೆರೆಕಂಡು ಸುಮಾರು 45 ವರ್ಷಗಳು ಕಳೆದಿವೆ.