'ಅಮ್ಮನ ಮನೆ' ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ನಟ ರಾಘವೇಂದ್ರ ರಾಜ್ ಕುಮಾರ್ ಸದ್ಯ 'ರಾಜತಂತ್ರ' ಚಿತ್ರದಲ್ಲಿ ಬ್ಯುಸಿ ಇದ್ದಾರೆ. ರಾಜತಂತ್ರ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಪುನೀತ್ ರಾಜ್‌ಕುಮಾರ್ ಲಾಂಚ್ ಮಾಡಿದ್ದಾರೆ.
ಬಳಿಕ ಮಾತನಾಡಿರುವ ಅಪ್ಪು, ರಾಜತಂತ್ರ ಚಿತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್ ಫೈಟ್ ಮಾಡಿರೋ ಸನ್ನಿವೇಶ ನನಗೆ ತುಂಬಾ ಇಷ್ಟ ಆಯ್ತು ಎಂದಿದ್ದಾರೆ. ಈ ಸಿನಿಮಾ ಮೂಲಕ ರಾಘವೇಂದ್ರ ರಾಜ್‌ಕುಮಾರ್ ಮೊದಲ ಬಾರಿಗೆ ನಿವೃತ್ತ ಯೋಧನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಘಣ್ಣನ ಜೊತೆ ಹಿರಿಯ ನಟಿ ಭವ್ಯ, ಶ್ರೀನಿವಾಸ್ ಮೂರ್ತಿ, ದೊಡ್ಡಣ್ಣ, ಶಂಕರ್ ಅಶ್ವಥ್, ನೀನಾಸಂ ಅಶ್ವಥ್ ಸೇರಿದಂತೆ ಬಹುದೊಡ್ಡ ತಾರಾಬಳಗವೇ ಇದೆ.
ಜೆ.ಎಂ.ಪ್ರಹ್ಲಾದ್ ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿದ್ದಾರೆ. ವಿಶ್ವಂ ಡಿಜಿಟಲ್ ಮೀಡಿಯಾ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಪಿವಿಆರ್ ಸ್ವಾಮಿ ನಿರ್ದೇಶನ ಮಾಡಿದ್ದಾರೆ. ಇನ್ನು ಹೊಸ ವರ್ಷಕ್ಕೆ ರಾಜತಂತ್ರ ಸಿನಿಮಾ ಬಿಡುಗಡೆ ಆಗಲಿದೆ.
- " class="align-text-top noRightClick twitterSection" data="">