ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ಜೇಮ್ಸ್. ಬಹದ್ದೂರ್ ಹಾಗೂ ಭರ್ಜರಿ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದ ಚೇತನ್ ಕುಮಾರ್ ಆ್ಯಕ್ಷನ್-ಕಟ್ ಹೇಳಿರುವ ಚಿತ್ರ.
ಪವರ್ ಸ್ಟಾರ್ ಸಾವಿಗೂ ಮುಂಚೆ ಸ್ಯಾಂಡಲ್ವುಡ್ನಲ್ಲಿ ಸಿಕ್ಕಾಪಟ್ಟೆ ಹೈಪ್ ಸೃಷ್ಟಿಸಿದ ಜೇಮ್ಸ್ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ವಿಶೇಷ ಅಂದ್ರೆ ಜೇಮ್ಸ್ ಸಿನಿಮಾದಲ್ಲಿ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕನಕಪುರದ ರೆಸಾರ್ಟ್ವೊಂದರಲ್ಲಿ ಶಿವರಾಜ್‌ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಸನ್ನಿವೇಶಗಳನ್ನ ನಿರ್ದೇಶಕ ಚೇತನ್ ಕುಮಾರ್ ಪುನೀತ್ ರಾಜ್‍ಕುಮಾರ್ ಫೋಟೋ ಅವತಾರದ ಬ್ಯಾಕ್ ಟ್ರಾಪ್‌ನಲ್ಲಿ ಚಿತ್ರೀಕರಣ ಮಾಡಿ ಕುಂಬಳಕಾಯಿ ಒಡೆದಿದ್ದಾರೆ. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್, ನಿರ್ದೇಶಕ ಚೇತನ್ ಕುಮಾರ್, ನಿರ್ಮಾಪಕ ಕಿಶೋರ್ ಸೇರಿದಂತೆ ಇಡೀ ಜೇಮ್ಸ್ ಚಿತ್ರತಂಡ ಇದೆ.
ಓದಿ: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಪುನೀತ್ ರಾಜ್ಕುಮಾರ್ ಬದುಕಿದ್ದಾಗ ಅವ್ರ ಆ್ಯಕ್ಷನ್ ಹಾಗೂ ಟಾಕಿ ಪೋರ್ಶನ್ಗಳನ್ನ ನಿರ್ದೇಶಕರು ಚಿತ್ರೀಕರಣ ಮಾಡಿಕೊಂಡಿದ್ದರು. ಈಗ ಅಪ್ಪು ಪಾತ್ರಕ್ಕೆ ಶಿವಣ್ಣ ಧ್ವನಿ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜಕುಮಾರ ಸಿನಿಮಾ ನಂತರ ನಟಿ ಪ್ರಿಯಾ ಆನಂದ್ ಜೋಡಿಯಾಗಿದ್ದು, ತೆಲುಗು ನಟ ಶ್ರೀಕಾಂತ್, ಚಿಕ್ಕಣ್ಣ, ಅವಿನಾಶ್ ಹೀಗೆ ದೊಡ್ಡ ತಾರ ಬಳಗ ಈ ಚಿತ್ರದಲ್ಲಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನವೇ, ಅಂದ್ರೆ ಮಾರ್ಚ್ 17ಕ್ಕೆ ಜೇಮ್ಸ್ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ ಎನ್ನಲಾಗಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ