ETV Bharat / sitara

ಕಸ್ತೂರಿ ಮಹಲ್ ಟೀಸರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್! - ಚಿತ್ರ ಕಸ್ತೂರಿ ಮಹಲ್ ಚಿತ್ರದ ಟೀಸರ್

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್​ನ ಟೀಸರನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ.

kasturi mahal
kasturi mahal
author img

By

Published : Jan 1, 2021, 8:36 AM IST

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತನ್ನದೇ ಬೇಡಿಕೆ ಹೆಚ್ಚಿಸಿಕೊಂಡಿರುವ ನಟಿ ಶಾನ್ವಿ ಶ್ರೀವಾಸ್ತವ್ ಸದ್ಯ ಕಸ್ತೂರಿ ಮಹಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಚಿತ್ರಕ್ಕೆ ಇದೀಗ ಪವರ್ ಸ್ಟಾರ್ ಸಾಥ್ ಸಿಕ್ಕಿದೆ.

ಕಸ್ತೂರಿ ಮಹಲ್ ಟೀಸರ್ ಬಿಡುಗಡೆ

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್. ಚಿತ್ರದ ಟೀಸರ್​​ ಅನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ.

puneeth rajkumar launches kasturi mahal movie teaser
ಕಸ್ತೂರಿ ಮಹಲ್ ಟೀಸರ್ ಬಿಡುಗಡೆ

ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪುನೀತ್ ರಾಜ್‍ಕುಮಾರ್, ನಮ್ಮ ಕುಟುಂಬಕ್ಕೆ ದಿನೇಶ್ ಬಾಬು ಅವರು ಬಹಳ ಆತ್ಮೀಯರು. ಶಿವಣ್ಣ‌ ಅವರ ಇನ್ಸ್‌ಪೆಕ್ಟರ್ ವಿಕ್ರಂ ಹಾಗೂ ನನ್ನ ಅಭಿನಯದ ಅಭಿ ಚಿತ್ರವನ್ನು ದಿನೇಶ್ ಬಾಬು ಅವರೇ ನಿರ್ದೇಶಿಸಿದ್ದಾರೆ. ಇದು ಅವರ ನಿರ್ದೇಶನದ 50ನೇ ಚಿತ್ರ ಎಂದು ತಿಳಿದು ಸಂತೋಷವಾಯಿತು.‌ ಕನ್ನಡದಲ್ಲಿ ಉತ್ತಮ ಚಿತ್ರಗಳನ್ನು ನಿರ್ದೇಶಿಸಿರುವ ದಿನೇಶ್ ಬಾಬು ಅವರು 100 ಚಿತ್ರಗಳ ನಿರ್ದೇಶನ ಮಾಡಲಿ ಎಂದು ಶುಭ ಕೋರಿದರು.

ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ, ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್​ಗಿದೆ. ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್ ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆ ಹಾರ, ಬಾಳೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.