ETV Bharat / sitara

ಸಾಧುಕೋಕಿಲ ನಿರ್ದೇಶನದ ಮಹಾಯೋಗಿ ಸಿದ್ಧಾರೂಢ ಚಿತ್ರಕ್ಕೆ ಪವರ್ ಸ್ಟಾರ್ ಸಾಥ್! - ಸಿದ್ದರೂಢರ ಮಹಿಮೆ

ನಮ್ಮ ಮನೆಗೂ, ಸಿದ್ಧಾರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ಧಾರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ ಎಂದು ನಟ ಪುನೀತ್ ರಾಜ್​ಕುಮಾರ್​ ತಿಳಿಸಿದರು.

punith-rajkumar
ನಟ ಪುನೀತ್ ರಾಜ್​ಕುಮಾರ್
author img

By

Published : Oct 28, 2021, 7:00 PM IST

ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್, ಪ್ರಯೋಗಾತ್ಮಕ ಚಿತ್ರಗಳ ಮಧ್ಯೆ ಭಕ್ತಿ ಪ್ರಧಾನ ಸಿನಿಮಾಗಳು ಗಮನ ಸೆಳೆಯುತ್ತವೆ. ಇದೀಗ ಮಹಾಮಹಿಮ ಸಿದ್ಧಾರೂಢರ ಜೀವನಾಧಾರಿತ ಚಿತ್ರವೊಂದು ನಿರ್ಮಾಣವಾಗಿದೆ.

ಮಹಾಯೋಗಿ ಸಿದ್ಧಾರೂಢ ಎಂಬ ಹೆಸರಿನ ಈ ಚಿತ್ರವನ್ನು ಸಾಧುಕೋಕಿಲ ನಿರ್ದೇಶಿಸಿದ್ದಾರೆ. ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಟ್ರೇಲರ್ ಅನ್ನು ಬಿಡುಗಡೆ ಮಾಡಿದರು.

ಈ ಬಗ್ಗೆ ನಟ ಪುನೀತ್ ರಾಜ್‍ಕುಮಾರ್ ಮಾತನಾಡಿ, ನಮ್ಮ ಮನೆಗೂ, ಸಿದ್ಧಾರೂಢ ಮಠಕ್ಕೂ ಅವಿನಾಭಾವ ಸಂಬಂಧವಿದೆ. ಅಪ್ಪಾಜಿ ಅವರಾಗಲಿ, ನಮ್ಮ ಕುಟುಂಬದ ಯಾರೇ ಆಗಲಿ, ಹುಬ್ಬಳ್ಳಿಗೆ ಹೋದಾಗ ಸಿದ್ಧಾರೂಢರ ಮಠಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ನಮ್ಮ ಅಜ್ಜಿ ಅವರು ಕೆಲವು ದಿನಗಳ ಕಾಲ ಈ ಮಠದಲ್ಲೇ ಇದ್ದರು ಎಂದು ಅಪ್ಪಾಜಿ ಹೇಳುತ್ತಿದ್ದರು. ಈ ಚಿತ್ರದ ಟ್ರೇಲರ್ ಬಿಡುಗಡೆಗೆ ಬರಬೇಕೆಂದು ಸಾಧುಕೋಕಿಲ ಅವರು ಕರೆದಾಗ ಸಂತೋಷವಾಯಿತು. ಟ್ರೇಲರ್ ತುಂಬಾ ಚೆನ್ನಾಗಿದೆ. ಸಿನಿಮಾ ನೋಡಲು ನಾನು ಕಾತುರನಾಗಿದ್ದೇನೆ ಎಂದರು.

punith-rajkumar
ಸಂಗೀತ ನಿರ್ದೇಶಕ ಸಾಧುಕೋಕಿಲ ಜೊತೆ ನಟ ಪುನೀತ್ ರಾಜ್​ಕುಮಾರ್

ಶರಣ ಶ್ರೇಷ್ಠರಾದ ಸಿದ್ಧಾರೂಢರ ಜೀವನಾಧಾರಿತ ಚಿತ್ರ ನಿರ್ದೇಶನ ಮಾಡಿದ್ದು ನನ್ನ ಪುಣ್ಯ. ಮಂಟೂರಿನ ಗುರುಗಳು ನನ್ನನ್ನ ಕರೆದು ಈ ರೀತಿಯ ಚಿತ್ರ ಮಾಡಿಕೊಡಬೇಕೆಂದು ಹೇಳಿದರು. ಈ ಸಲುವಾಗಿ ನನ್ನನ್ನು ದೆಹಲಿಗೆ ಕಳುಹಿಸಿ ಅಲ್ಲಿ ಸ್ವಾಮಿನಾರಾಯಣ ಆಶ್ರಮದಲ್ಲಿ ಗುರುಗಳ ಕುರಿತು ಚಿತ್ರ ಮಾಡಿದ್ದಾರೆ. ನೋಡಿ ಬನ್ನಿ ಎಂದರು. ನೋಡಿ ಬಂದೆ. ಎಲ್ಲರಿಗೂ ಸಾಧುಕೋಕಿಲ, ಇಂತಹ ಚಿತ್ರ ಮಾಡಿದ್ದಾರಾ? ಎಂಬ ಆಶ್ಚರ್ಯ. ನನಗೂ ಮೊದಲು ಹಾಗೆ ಅನಿಸಿತು ಎಂದು ಸಂಗೀತ ನಿರ್ದೇಶಕ ಸಾಧುಕೋಕಿಲ ತಿಳಿಸಿದರು.

ಹೆಚ್ಚಿನ ಜನ ಹುಬ್ಬಳ್ಳಿಯ ಸಿದ್ಧಾರೂಢ ಮಠ ನೋಡಿರುತ್ತೀರಿ. ಆದರೆ, ಮಂಟೂರಿನ ಸಿದ್ಧಾರೂಢ ಮಠಕ್ಕೆ ಹೋಗಿ ಬನ್ನಿ. ಒಂದು ರೀತಿ ಸ್ವಾಮಿನಾರಾಯಣ ಮಂದಿರ ಇದ್ದ ಹಾಗೆ ಇದೆ. ನಮ್ಮ ಚಿತ್ರದಲ್ಲಿ ಸಿದ್ಧಾರೂಢರು ಎಂಟು ವರ್ಷದಿಂದ ನಲವತ್ತೆಂಟು ವರ್ಷಗಳ ನಡುವೆ ನಡೆಯುವ ಮಹಿಮೆಗಳನ್ನು ತೋರಿಸಲಾಗಿದೆ. ಮಂಟೂರು, ಹೈದರಾಬಾದ್, ಕಾಶ್ಮೀರ, ಸಕಲೇಶಪುರ ಹಾಗೂ ಕರ್ನಾಟಕದ ಸುಂದರವಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿತ್ರೀಕರಣ ನಡೆಯುವಾಗ ನನಗೂ ಕೆಲವು ವಿಶೇಷ ಅನುಭವಗಳಾದವು.

ಚಿತ್ರದಲ್ಲಿ ಸುಮಧುರ ನಾಲ್ಕು ಹಾಡುಗಳಿವೆ. ಈ ಚಿತ್ರ ನಿರ್ದೇಶನಕ್ಕೆ ನನಗೆ ನನ್ನ ಪುತ್ರ ಸುರಾಗ್ ಮಾಡಿದ ಸಹಾಯ ಮರೆಯುವ ಹಾಗಿಲ್ಲ. ಇದೇ ನವೆಂಬರ್ 9ರಂದು ಮಂಟೂರಿನ ಚಿತ್ರಮಂದಿರದಲ್ಲಿ 55 ನಿಮಿಷಗಳ ಅವಧಿಯ ಈ ಚಿತ್ರ ಬಿಡುಗಡೆಯಾಗುತ್ತಿದೆ. ಅದೊಂದೇ ಕಡೆ ಮಾತ್ರ ಈ ಚಿತ್ರ ನಿರಂತರವಾಗಿ ಪ್ರದರ್ಶನವಾಗುತ್ತಿರುತ್ತದೆ ಎಂದರು.

ಮಹಾಶರಣರಾದ ಸಿದ್ಧಾರೂಢರ ಮಹಿಮೆ ಅಪಾರ. ಸುಮಾರು ಏಳುವರೆ ಸಾವಿರಕ್ಕೂ ಅಧಿಕ ಮಾರ್ಗವನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದವರು ಅವರು. ಅಂತಹ ಮಹಿಮಾಪುರುಷರ ಬಗ್ಗೆ ನಮಗೆ ಚಿತ್ರವೊಂದನ್ನು ನಿರ್ಮಿಸುವ ಬಯಕೆಯಾಗಿ ಸಾಧುಕೋಕಿಲ ಅವರನ್ನು ಸಂಪರ್ಕಿಸಿದ್ದೆವು. ಅವರು ಉತ್ತಮವಾಗಿ ತೆಗೆದುಕೊಟ್ಟಿದ್ದಾರೆ. ನಮ್ಮ ಮಂಟೂರ್ ಪಾರ್ಕ್​ನಲ್ಲಿ ತ್ರಿಡಿ ಚಿತ್ರಮಂದಿರ, 7D ಚಿತ್ರಮಂದಿರ, ಸಿದ್ದರೂಢ ಥಿಯೇಟರ್, ಭೂತದಮನೆ, ಜುರಾಸಿಕ್‌ ಪಾರ್ಕ್‌, ಜಂಗಲ್ ಪಾರ್ಕ್, ವೈಷ್ಣೋದೇವಿ ಗುಹೆ, ವಿಜ್ಞಾನ ಲೋಕ, ಜಂಗಲ್ ಪಾರ್ಕ್, ಹೋಟೆಲ್ ಭೂಕಂಪ, ಗಾಜಿನ ಮನೆ ಹೀಗೆ ಹತ್ತು ಹಲವು ವಿಶೇಷಗಳಿವೆ.

ಸ್ವಾಮಿನಾರಾಯಣ ಆಶ್ರಮವನ್ನೇ ಹೋಲುವ ಹಾಗೆ ಪುಟ್ಟ ಊರಿನಲ್ಲಿ ಇದನ್ನೆಲ್ಲ ನಿರ್ಮಾಣ ಮಾಡಿದ್ದೇವೆ. ಎಲ್ಲರೂ ಈ ಸ್ಥಳಕ್ಕೆ ಭೇಟಿ ನೀಡಬೇಕು. ನಮ್ಮ ಊರಿನ ಚಿತ್ರಮಂದಿರದಲ್ಲಿ ಮಾತ್ರ ಈ ಚಿತ್ರ ಪ್ರದರ್ಶನವಾಗಲಿದೆ ಎಂದ ಸದಾನಂದ ಸ್ವಾಮಿಗಳು, ಡಾ. ರಾಜ್​ಕುಮಾರ್ ಅವರಿಗೆ ಮಠದೊಂದಿಗಿದ್ದ ಸಂಬಂಧವನ್ನು ನೆನಪಿಸಿಕೊಂಡರು.

ಸಾಧುಕೋಕಿಲ ಪುತ್ರ ಸುರಾಗ್ ಚಿತ್ರ ಸಾಗಿ ಬಂದ ವಿಷಯವನ್ನು ವಿಸ್ತಾರವಾಗಿ ವಿವರಿಸಿದರು. ಕಲಾವಿದರಾದ ತೀರ್ಥೇಶ್ ಹಾಗೂ ಅರವಿಂದ್ ಕುಪ್ಲಿಕರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಜೈ ಆನಂದ್ ಛಾಯಾಗ್ರಹಣ ಹಾಗೂ ಆನಂದ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಬಾಗಲಕೋಟೆಯ ಮುಧೋಳದ ಮಂಟೂರಿನ ಶ್ರೀ ಸದಾನಂದ ಮಹಾಸ್ವಾಮಿಗಳು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

ಓದಿ: 26 ವರ್ಷದ ಯುವ ನಟ 110 ವರ್ಷದ ಪಾತ್ರದಲ್ಲಿ.. 'ಭಜರಂಗಿ 2'ದಲ್ಲಿ ಹೈಪ್​ ಸೃಷ್ಟಿಸಿದ ಆರಡಿ 'ವಜ್ರಗಿರಿ'

ETV Bharat Logo

Copyright © 2025 Ushodaya Enterprises Pvt. Ltd., All Rights Reserved.