ರೈಡರ್ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಬಾಸ್ಕೆಟ್ ಬಾಲ್ ಪ್ಲೇಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೈಡರ್ ಚಿತ್ರದ ಬಿಡುಗಡೆಗೆ ಇನ್ನು ಒಂದು ದಿನ ಬಾಕಿ ಇದೆ. ಹೀಗಾಗಿ ಖಾಸಗಿ ಹೋಟೆಲ್ನಲ್ಲಿ ರೈಡರ್ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಬುಧವಾರ ಮಾಡಲಾಯಿತು.
ಈ ಕಾರ್ಯಕ್ರಮಕ್ಕೆ ನಿಖಿಲ್ ಜೊತೆ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಟಿಸಿದ್ದ ರಚಿತಾ ರಾಮ್, ನಿರ್ಮಾಪಕ ಕೆ ಮಂಜು, ಪಡ್ಡೆಹುಲಿ ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕರಾದ ಎ.ಪಿ ಅರ್ಜುನ್, ನಂದ ಕಿಶೋರ್, ಗುರುದೇಶ ಪಾಂಡೆ ಆಗಮಿಸಿ ರೈಡರ್ ಚಿತ್ರಕ್ಕೆ ಶುಭಾ ಹಾರೈಯಿಸಿದರು.
ಇದೇ ಸಂದರ್ಭದಲ್ಲಿ ಸೂಪರ್ ಹಿಟ್ ಆಗಿರುವ ರೈಡರ್ ಚಿತ್ರದ ಡವ್ವ ಡವ್ವ ಹಾಡಿಗೆ, ರಚಿತಾ ರಾಮ್ , ನಿರ್ಮಾಪಕ ಕೆ ಮಂಜು, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಈ ಚಿತ್ರದ ನಾಯಕಿ ಕಾಶ್ಮೀರ ಪರ್ದೇಸಿ ಹಾಗು ನಿಖಿಲ್ ಕುಮಾರಸ್ವಾಮಿ ವೇದಿಕೆ ಮೇಲೆ ಸಖತ್ ಸ್ಟೆಪ್ ಹಾಕಿದರು. ಯುವರಾಜ ನಿಖಿಲ್ ಹೇಳಿ ಕೊಟ್ಟ ಸ್ಟೆಪ್ಗೆ ರಚಿತಾ ರಾಮ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಕೆ ಮಂಜು ಡ್ಯಾನ್ಸ್ ಮಾಡಿ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ನಿರ್ಮಾಪಕ ಕೆ ಮಂಜು ಮಾತನಾಡಿ, ಮಲ್ಟಿಪ್ಲೆಕ್ಸ್ ಗಳಲ್ಲಿ, ಕೊರೊನಾ ವ್ಯಾಕ್ಸಿನೇಷನ್ ಹಾಕಿರುವವರು ಮಾತ್ರ ಮಾಲ್ ಗಳಿಗೆ ಪ್ರವೇಶ ಮಾಡಿರೋದು, ನಿರ್ಮಾಪಕರಿಗೆ ದೊಡ್ಡ ನಷ್ಟ ಆಗುತ್ತೆ. ಸರ್ಕಾರ ಈ ಕ್ರಮದ ಬಗ್ಗೆ ಪರಿಗಣಿಸಿ ನಿರ್ಮಾಪಕರಿಗೆ ಸಹಾಯ ಆಗುವಂತೆ ಸರ್ಕಾರದ ಕ್ರಮ ಕೈಗೊಳ್ಳಬೇಕು ಅಂತಾ ಮಂಜು ಸರ್ಕಾರಕ್ಕೆ ಒತ್ತಾಯಿಸಿದರು.
ಇನ್ನು ರೈಡರ್ ಚಿತ್ರವನ್ನ ಟಾಲಿವುಡ್ ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶನ ಮಾಡಿದ್ದಾರೆ. ದತ್ತಣ್ಣ, ಚಿಕ್ಕಣ್ಣ, ಶೋಭರಾಜ್, ರಾಜೇಶ್ ನಟರಂಗ, ಶಿವರಾಜ್.ಕೆ.ಆರ್.ಪೇಟೆ, ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ, ಸಂಪದ ಹುಲಿವಾನ, ನಿಹಾರಿಕ ಸೇರಿದಂತೆ ದೊಡ್ಡ ತಾರಬಳಗ ಚಿತ್ರದಲ್ಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಈ ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದಾರೆ.
ಟಕೆ.ಎಮ್.ಪ್ರಕಾಶ್ ಸಂಕಲನ, ಶರತ್ ಚಕ್ರವರ್ತಿ ಸಂಭಾಷಣೆ, ಭೂಷನ್ ಕೋರಿಯೊಗ್ರಾಫಿ, ಡಾ.ರವಿವರ್ಮ ಸಾಹಸ ಚಿತ್ರಕ್ಕಿದೆ. ಶ್ರೀಶ ಕುಡುಟಟವಳ್ಳಿ ಛಾಯಾಗ್ರಹಣ ಚಿತ್ರಕ್ಕಿದೆ. ಚಂದ್ರ ಮನೋಹರನ್ ಹಾಗು ಸುನೀಲ್ ಗೌಡ ಜಂಟಿಯಾಗಿ ಈ ಸಿನಿಮಾವನ್ನ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸದ್ಯ ಟೀಸರ್ನಿಂದಲೇ ಸಖತ್ ಹವಾ ಸೃಷ್ಟಿಸಿರುವ ರೈಡರ್ ಸಿನಿಮಾ ಕ್ರಿಸ್ಮಸ್ ಹಬ್ಬಕ್ಕೆ ಪ್ರೇಕ್ಷಕರಿಗೆ ದರ್ಶನ ಕೊಡಲಿದೆ.