ನವದೆಹಲಿ: ನಟಿ ರಾಧಿಕಾ ಮದನ್ ಇಂದು ಕೊರೊನಾ ವ್ಯಾಕ್ಸಿನ್ ಮೊದಲ ಲಸಿಕೆ ಪಡೆದುಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕೋವಿಡ್ ಲಸಿಕಾ ಕೇಂದ್ರಕ್ಕೆ ತೆರಳಿ ವ್ಯಾಕ್ಸಿನ್ ಹಾಕಿಸಿಕೊಂಡಿರುವ ನಟಿ, ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ. ಇತರರು ವ್ಯಾಕ್ಸಿನ್ಗೋಸ್ಕರ ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
![Actor Radhika Madan](https://etvbharatimages.akamaized.net/etvbharat/prod-images/11651096_f.jpg)
ವಾಕ್ಸಿನೇಷನ್ ಕೇಂದ್ರಗಳಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಲಸಿಕೆ ಪಡೆದುಕೊಳ್ಳುವಂತೆ ಮನವಿ ಮಾಡಿರುವ ನಟಿ, ಕೈಗಳನ್ನ ಮೇಲಿಂದ ಮೇಲೆ ಸ್ವಚ್ಛಗೊಳಿಸುವಂತೆ ಹಾಗೂ ಮಾಸ್ಕ್ ಹಾಕಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಗಾರೆ ಕೆಲಸದಲ್ಲಿ ತೊಡಗಿಕೊಂಡ ನಟ ಚಿಕ್ಕಣ್ಣ
ಈಗಾಗಲೇ ಸಲ್ಮಾನ್ ಖಾನ್, ಹೇಮಾ ಮಾಲಿನಿ, ಅನುಪಮ್ ಖೇರ್, ಜಾನಿ ಲಿವರ್, ಸೈಫ್ ಅಲಿ ಖಾನ್, ಕಮಲ್ ಹಾಸನ್ ಸೇರಿದಂತೆ ಅನೇಕರು ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ. ಕೋವಿಡ್ ವಿರುದ್ಧದ ಜಾಗೃತಿ ಮೂಡಿಸಲು ಬಾಲಿವುಡ್ ನಟ-ನಟಿಯರು ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.