ETV Bharat / sitara

ಮೈಸೂರಿನಲ್ಲಿ ಚಿತ್ರನಗರಿ ಸ್ಥಾಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ರಾಜೇಂದ್ರಸಿಂಗ್ ಬಾಬು..!

author img

By

Published : Mar 20, 2021, 6:52 AM IST

ಬೆಂಗಳೂರಿನ ಹೆಸರುಘಟ್ಟದಲ್ಲಿ ಚಿತ್ರನಗರಿ ಸ್ಥಾಪನೆಯಾಗಲಿದೆ ಎಂದು ಕಳೆದ ವರ್ಷ ಹೇಳಲಾಗಿತ್ತು. ಆದರೆ ಇದೀಗ ಚಿತ್ರನಗರಿ ಬೆಂಗಳೂರಿನಿಂದ ಮೈಸೂರಿಗೆ ವರ್ಗಾವಣೆಯಾಗಿದೆ. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕೂಡಾ ಈ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

Rajendra singh babu
ರಾಜೇಂದ್ರಸಿಂಗ್ ಬಾಬು

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿರುವುದು ಹಿರಿಯ ನಿರ್ದೇಶಕ ಹಾಗೂ ನಿರ್ಮಾಪಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ 40 ವರ್ಷದಿಂದ ಹೆಸರಘಟ್ಟ, ರಾಮನಗರ ಅಲ್ಲಿ, ಇಲ್ಲಿ ಚಿತ್ರನಗರಿ ತಲೆಯತ್ತಲಿದೆ ಎಂಬ ಸುದ್ದಿಗಳನ್ನೇ ಕೇಳುತ್ತಾ ಬಂದಿದ್ದೆವು. ಇದೀಗ ಮೈಸೂರು ಸೂಚಿಸಿದ್ದಕ್ಕೆ ಖುಷಿಯಾಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

Rajendra singh babu
ಸ್ಯಾಂಡಲ್​ವುಡ್ ದಿಗ್ಗಜರು

ಇದನ್ನೂ ಓದಿ: ಹೊರಗಿನವರ ಸಿನಿಮಾದಲ್ಲಿ ಏಕೆ ನಟಿಸುವುದಿಲ್ಲ... ರಕ್ಷಿತ್ ಶೆಟ್ಟಿ ನೀಡುವ ಉತ್ತರ ಏನು...?

ಇದರ ಅನುಷ್ಠಾನಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಬಿ.ಎಸ್​​​. ಯಡಿಯೂರಪ್ಪ, ವಿಜಯೇಂದ್ರ, ಶಿವರಾತ್ರಿ ಸ್ವಾಮೀಜಿ ಅವರಿಗೆ ನನ್ನ ಕಡೆಯಿಂದ ಧನ್ಯವಾದ. ಅದೇ ರೀತಿ ಸಚಿವರಾದ ಎಸ್.ಟಿ ಸೋಮಶೇಖರ್, ಸಿ.ಸಿ ಪಾಟೀಲ್, ಸಿ.ಪಿ.ಯೋಗಿಶ್ವರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ಧನ್ಯವಾದ ಹೇಳಿದ್ದಾರೆ."ಮೈಸೂರಿಗೆ 85 ವರ್ಷಗಳ ಸಿನಿಮಾ ಇತಿಹಾಸವಿದೆ. ಇಂಥಹ ಇತಿಹಾಸ ಇರುವ ನಗರಕ್ಕೆ ಚಿತ್ರನಗರಿ ಅನ್ನೋ ಮತ್ತೊಂದು ಕಿರೀಟ ಮುಡಿಗೇರಿದ್ದು, ಚಿತ್ರೋದ್ಯಮದ ಪ್ರಗತಿಗೆ ದಾರಿಯಾಗಿದೆ. ಮೈಸೂರು ಪ್ರವಾಸೋದ್ಯಮಕ್ಕೂ ಇದರಿಂದ ಇನ್ನೂ ಹೆಚ್ಚಿನ ಆದ್ಯತೆ ಸಿಕ್ಕಂತಾಗಿದೆ. ಕೇವಲ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಸಾಕಷ್ಟು ಲೋಕೇಷನ್‌ಗಳು ಮೈಸೂರಿನಲ್ಲಿವೆ. ಬಹಳಷ್ಟು ಪ್ಯಾಲೇಸ್‌ಗಳಿವೆ. 5 ನದಿಗಳಿವೆ. ಹೀಗಾಗಿಯೇ ವಿಷ್ಣುವರ್ಧನ್ ಮತ್ತು ರಜನಿಕಾಂತ್ ಅವರಿಗೂ ಮೈಸೂರು ಅಂದ್ರೆ ಪಂಚಪ್ರಾಣ. ಇದೀಗ ಸರ್ಕಾರ ಇಷ್ಟೆಲ್ಲಾ ಐತಿಹ್ಯ ಇರುವ ನಗರಕ್ಕೆ ಚಿತ್ರನಗರಿ ನೀಡುತ್ತಿದೆ. ಸರ್ಕಾರಕ್ಕೆ, ಚಿತ್ರನಗರಿ ಸ್ಥಾಪನೆಗೆ ಕಾರಣೀಕರ್ತರಾದ ಎಲ್ಲರಿಗೂ ನನ್ನ ಧನ್ಯವಾದಗಳು" ಎಂದು ಹಿರಿಯ ನಿರ್ದೇಶಕ ಹಾಗು ನಿರ್ಮಾಪಕಎಸ್.ವಿ. ರಾಜೇಂದ್ರ ಸಿಂಗ್ ಬಾಬು ಸಂತೋಷ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.