ತಮಿಳು ಸೂಪರ್ಸ್ಟಾರ್ ರಜಿನಿಕಾಂತ್ ನಾಳೆ ತಮ್ಮ ರಜಿನಿ ಮಕ್ಕಳ ಮಂದ್ರಮ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಸ್ವತಃ ರಜಿನಿಕಾಂತ್ ಹೇಳಿದ್ದಾರೆ.
ನಾಳೆ ನಡೆಯಲಿರುವ ಸಭೆಯಲ್ಲಿ ತಮ್ಮ ರಾಜಕೀಯ ಪಕ್ಷ ಕಟ್ಟುವ ಬಗ್ಗೆ ಚರ್ಚೆ ನಡೆಯಲಿವೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಜರುಗುವ ಸಾಧ್ಯತೆಗಳಿವೆ.

ಕಳೆದ ವಾರ ನಡೆದ ಸಭೆಯ ನಂತ್ರ ರಜಿನಿ ತಮ್ಮ ಅಸಮಧಾನ ಹೊರಹಾಕಿದ್ದು, ನಾಳೆ ಸಭೆಯಲ್ಲಿ ತಮ್ಮ ಯೋಜನೆಗಳನ್ನು ಬಹಿರಂಗಪಡಿಸುವ ಸಾಧ್ಯತೆಗಳಿವೆ. ಇನ್ನು ಕೆಲವು ಮೂಲಗಳ ಪ್ರಕಾರ ತಮ್ಮ ಪಕ್ಷವನ್ನು ಎಲ್ಲಿ ಮತ್ತು ಯಾವಾಗ ಸ್ಥಾಪಿಸಬೇಕು ಎಂಬುದರ ಬಗ್ಗೆ ನಿರ್ಧಾರಗಳು ಹೊರ ಬೀಳುವ ಸಾಧ್ಯತೆಗಳಿವೆ.