ETV Bharat / sitara

ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರನ್ನು ಭೇಟಿ ಮಾಡಿದ ಫಾಲ್ಕೆ ಪ್ರಶಸ್ತಿ ಪುರಸ್ಕೃತ ರಜನಿ - Prime Minister Narendra Modi

ಇತ್ತೀಚೆಗೆ ನಟ ರಜನಿಕಾಂತ್ ಅವರಿಗೆ ಭಾರತದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರ ಬೆನ್ನಲ್ಲೇ ರಜನಿಕಾಂತ್ ಹಲವು ಗಣ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು..

Rajinikanth meets Prime Minister Narendra Modi, President Ram Nath Kovind

author img

By

Published : Oct 27, 2021, 4:26 PM IST

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಕುರಿತು ಕೆಲ ಹೊತ್ತು ಪರಸ್ಪರ ಚರ್ಚೆ ಮಾಡಿದರು.

Rajinikanth meets Prime Minister Narendra Modi, President Ram Nath Kovind
ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಫಾಲ್ಕೆ ಪ್ರಶಸ್ತಿ ಪುರಸ್ಕೃತ ರಜನಿಕಾಂತ್

ಗಣ್ಯರ ಈ ಅಪೂರ್ವ ಭೇಟಿಯ ಸಂದರ್ಭವನ್ನು ಜಾಲತಾಣದಲ್ಲಿ ಹಂಚಿಕೊಂಡಿರುವ ರಜನಿಕಾಂತ್, ನಾನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿ ಲಭಿಸಿದ್ದಕ್ಕೆ ಅವರು ಅಭಿನಂದನೆ ಸಲ್ಲಿಸಿದರು. ಅವರ ಈ ಸಂದೇಶ ನನಗೆ ಸಂತೋಷ ತರಿಸಿದೆ ಎಂದು ಬರೆದುಕೊಂಡಿದ್ದಾರೆ.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು

ಇತ್ತೀಚೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಟ ರಜನಿಕಾಂತ್ ಅವರಿಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ' ಪ್ರದಾನ ಮಾಡಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಫಾಲ್ಕೆ ಪ್ರಶಸ್ತಿ ಪುರಸ್ಕೃತ ರಜನಿಕಾಂತ್

ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸೋಮವಾರ ಸ್ವೀಕರಿಸಿದ್ದು, ಪ್ರಶಸ್ತಿಯನ್ನು ತಮ್ಮ ಗುರು, ಖ್ಯಾತ ನಿರ್ದೇಶಕ ದಿ. ಕೆ ಬಾಲಚಂದರ್ ಅವರಿಗೆ ಅರ್ಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.