ಖ್ಯಾತ ನಟ ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾಗಿರುವುದು ಸದ್ಯಕ್ಕೆ ದೊಡ್ಡ ಮಟ್ಟದ ಸುದ್ದಿಯಾಗಿದೆ. ಅಭಿಮಾನಿಗಳು ಕೂಡಾ ತಲೈವಾ ನಿರ್ಧಾರಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಬಹಳ ವರ್ಷಗಳಿಂದ ರಾಜಕೀಯ ಸೇರುವ ಅಭಿಲಾಷೆ ವ್ಯಕ್ತಪಡಿಸಿದ್ದ ರಜನಿ ಕೊನೆಗೂ ಪಕ್ಷ ಸ್ಥಾಪನೆಗೆ ಮುಂದಾಗಿದ್ದು ಅದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಸಹೋದರ ಸತ್ಯನಾರಾಯಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ರಜನಿಕಾಂತ್ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ ತಮ್ಮ ಅಣ್ಣ ಸತ್ಯನಾರಾಯಣ ಅವರನ್ನು ಭೇಟಿ ಮಾಡಿ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಈ ಫೋಟೋ ಸದ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ರಜನಿಕಾಂತ್ ಇತ್ತೀಚೆಗೆ ತಮ್ಮ ರಾಜಕೀಯ ಸಲಹೆಗಾರರೊಂದಿಗೆ ಸಭೆ ನಡೆಸಿದ್ದು ಶೀಘ್ರವೇ ರಾಜಕೀಯ ಪಕ್ಷವೊಂದನ್ನು ಸ್ಥಾಪಿಸುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಡಿಸೆಂಬರ್ 31 ರಂದು ಘೋಷಿಸಲಾಗುವುದು ಎಂದು ಟ್ವೀಟ್ ಮಾಡಿದ್ದರು. ಚುನಾವಣೆಗೂ ಮುನ್ನವೇ ರಜನಿ ಪಕ್ಷ ಸ್ಥಾಪಿಸಲಿದ್ದು ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಖಂಡಿತ ದೊಡ್ಡ ಗೆಲುವು ಸಾಧಿಸಲಿದೆ ಎಂದು ರಜನಿಕಾಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.