ಚೆನ್ನೈ (ತಮಿಳುನಾಡು): ಹೈದರಾಬಾದ್ನ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಂದ ಸೂಪರ್ಸ್ಟಾರ್ ರಜಿನಿಕಾಂತ್ರನ್ನು ಅವರ ಪತ್ನಿ ಆರತಿ ಮಾಡಿ ಬರಮಾಡಿಕೊಂಡಿದ್ದಾರೆ.
ಕಬಾಲಿ ನಟ ರಜಿನಿಕಾಂತ್ ಕಳೆದ ಕೆಲ ದಿನಗಳಿಂದ ಹೈದರಾಬಾದ್ನಲ್ಲಿ ತಮಿಳಿನ 'ಅಣ್ಣಾತೆ' ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಚಿತ್ರತಂಡದ ಕೆಲ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾದ ಹಿನ್ನೆಲೆ ಶೂಟಿಂಗ್ ನಿಲ್ಲಿಸಲಾಗಿತ್ತು. ರಜಿನಿಕಾಂತ್ರ ವರದಿ ನಗೆಟಿವ್ ಬಂದಿತ್ತಾದರೂ, ಐಸೋಲೇಷನ್ನಲ್ಲಿದ್ದ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ರಕ್ತದೊತ್ತಡದಲ್ಲಿ ಏರುಪೇರಾಗಿ ಡಿ.25 ರಂದು ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಅಪೋಲೋ ಆಸ್ಪತ್ರೆಯಿಂದ ಬಿಡುಗಡೆಯಾದ ಸೂಪರ್ ಸ್ಟಾರ್ ರಜಿನಿಕಾಂತ್
ಆರೋಗ್ಯದಲ್ಲಿ ಸುಧಾರಣೆ ಕಂಡ ಬಳಿಕ ಭಾನುವಾರ ರಜಿನಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಪುತ್ರಿ ಐಶ್ವರ್ಯಾ ಧನುಷ್ ಜೊತೆ ಅವರು ವಿಮಾನದಲ್ಲಿ ಚೆನ್ನೈಗೆ ತೆರಳಿದ್ದಾರೆ. ಮನೆಗೆ ಆಗಮಿಸಿದ ಪತಿಯನ್ನು ಲತಾ ರಜಿನಿಕಾಂತ್ ಆರತಿ ಬೆಳಗಿ ಸ್ವಾಗತ ಕೋರಿದ್ದಾರೆ. ಈ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.