ETV Bharat / sitara

ಸೆನ್ಸಾರ್​​ನಲ್ಲಿ ಪಾಸ್​ ಆದ '777 ಚಾರ್ಲಿ' - Rakshit Shetty new movie

ಒಬ್ಬ ಮನುಷ್ಯನ ಬಾಳಲ್ಲಿ ಚಾರ್ಲಿ ಎಂಬ ನಾಯಿಯ ಆಗಮನದಿಂದ ಏನೆಲ್ಲ ಆಗುತ್ತೆ ಅನ್ನೋದು ಈ '777 ಚಾರ್ಲಿ' ಸಿನಿಮಾ ಸ್ಟೋರಿ. ಕಳೆದ ಎರಡು ವರ್ಷಗಳಿಂದ ಚಿತ್ರೀಕರಣ ಮುಗಿಸಿರುವ ಚಿತ್ರವು ಟೀಸರ್ ಹಾಗೂ ಹಾಡುಗಳಿಂದ ಸಖತ್ ಸದ್ದು ಮಾಡುತ್ತಿದೆ.

rakshit-shetty-777-charlie-passed-censor-board-with-u-slash-a
ಸೆನ್ಸಾರ್​​ನಲ್ಲಿ ಪಾಸ್​ ಆದ '777 ಚಾರ್ಲಿ'
author img

By

Published : Jan 24, 2022, 11:00 PM IST

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ '777 ಚಾರ್ಲಿ' . ಸದ್ಯ ಪೋಸ್ಟರ್ ಹಾಗೂ ಮೇಕಿಂಗ್​​ನಿಂದ ಗಮನ ಸೆಳೆದಿರುವ ಚಾರ್ಲಿ, ಸೆನ್ಸಾರ್​​ನಲ್ಲಿ ಪಾಸ್​​ ಆಗಿದ್ದು, ಯು/ಎ ಸರ್ಟಿಫಿಕೆಟ್ ಪಡೆದುಕೊಂಡಿದೆ.

ಒಬ್ಬ ಮನುಷ್ಯನ ಬಾಳಲ್ಲಿ ಚಾರ್ಲಿ ಎಂಬ ನಾಯಿಯ ಆಗಮನದಿಂದ ಏನೆಲ್ಲ ಆಗುತ್ತೆ ಅನ್ನೋದು ಈ '777 ಚಾರ್ಲಿ' ಸಿನಿಮಾ ಸ್ಟೋರಿ. ಕಳೆದ ಎರಡು ವರ್ಷಗಳಿಂದ ಚಿತ್ರೀಕರಣ ಮುಗಿಸಿರುವ ಚಿತ್ರವು ಟೀಸರ್ ಹಾಗೂ ಹಾಡುಗಳಿಂದ ಸಖತ್ ಸದ್ದು ಮಾಡುತ್ತಿದೆ. ರಕ್ಷಿತ್ ಶೆಟ್ಟಿ ಜೊತೆ ಸಂಗೀತಾ ಶೃಂಗೇರಿ ತೆರೆ ಹಂಚಿಕೊಂಡಿದ್ದಾರೆ.

Rakshit Shetty 777  Charlie passed censor board with U/A
777 ಚಾರ್ಲಿ

ರಾಜ್‌ ಬಿ. ಶೆಟ್ಟಿ, ಡ್ಯಾನಿಶ್‌ ಸೇಠ್, ಬಾಬಿ ಸಿಂಹ, ಬೇಬಿ ಶಾರ್ವರಿ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಬಾಬಿ ಸಿಂಹ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಯುವ ನಿರ್ದೇಶಕ ಕಿರಣ್‌ ರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ '777 ಚಾರ್ಲಿ' ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್‌ ನಾಯಿ ಪೂರ್ಣ ಪ್ರಮಾಣದ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಚಿತ್ರವು ಪರಮ್ ಸ್ಟುಡಿಯೋಸ್ ಮತ್ತು ಪುಷ್ಕರ್ ಫಿಲ್ಮ್ ಬ್ಯಾನರ್​​ನಲ್ಲಿ ನಿರ್ಮಾಣ ಆಗುತ್ತಿದ್ದು, ಕಿರಣ್ ರಾಜ್ ಆಕ್ಷನ್ ಹೇಳುತ್ತಿದ್ದಾರೆ.

ಈ ಚಿತ್ರವು 5 ಭಾಷೆಗಳಲ್ಲಿ ನಿರ್ಮಾಣ ಆಗಿದ್ದು, ನೊಬಿನ್ ಪೌಲ್ ಸಂಗೀತ ಹಾಗೂ ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಮನುಷ್ಯ ಮತ್ತು ಶ್ವಾನದ ನಡುವಿನ ಬಾಂಧವ್ಯ ಹೊಂದಿರುವ '777 ಚಾರ್ಲಿ' ಸಿನಿಮಾ ಇದೇ ವರ್ಷ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಸೆಂಚುರಿ ಸ್ಟಾರ್​​ ಶಿವರಾಜ್​ ಕುಮಾರ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.