ಕನ್ನಡ ಚಿತ್ರರಂಗದ ಮೋಸ್ಟ್ ಪ್ರಾಮಿಸಿಂಗ್ ಹೀರೋ ಆಗಿರುವ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ನಿನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಹಾರಿಕಾ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಹಸೆಮಣೆ ಏರಿದ್ದಾರೆ.
ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ನೆರವೇರಿದೆ. ರಮೇಶ್ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ ಜೋರಾಗಿತ್ತು. ಅರಿಶಿಣ ಶಾಸ್ತ್ರ, ಮೆಹಂದಿ ಶಾಸ್ತ್ರ, ಸಂಗೀತ ಸಮಾರಂಭ ಸೇರಿದಂತೆ ಮದುವೆಯ ಶಾಸ್ತ್ರಗಳು ಅದ್ಧೂರಿಯಾಗಿ ನಡೆದಿವೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಅಕ್ಷಯ್, ನಿಹಾರಿಕಾ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಓದಿ: ಸಹೋದ್ಯೋಗಿ ಅಕ್ಷಯ್ ಜೊತೆ ಸಪ್ತಪದಿ ತುಳಿದ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ
ನಿಹಾರಿಕಾ ಮದುವೆ ಸಮಾರಂಭದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಚಿತ್ರರಂಗದ ಕೆಲವು ಗಣ್ಯರು ಭಾಗಿಯಾಗಿ ನವಜೋಡಿಗೆ ಶುಭ ಕೋರಿದ್ದಾರೆ.