ರಮೇಶ್ ಅರವಿಂದ್ ನಿರ್ದೇಶನದ '100' ಚಿತ್ರ ಸೆನ್ಸಾರ್ ಮುಗಿಸಿ ಬಿಡುಗಡೆಗೆ ರೆಡಿಯಾಗಿದೆ. ಈ ಖುಷಿಯನ್ನು ನಟ, ನಿರ್ದೇಶಕ ರಮೇಶ್ ಅರವಿಂದ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ತೆಗೆದ ವಿಡಿಯೋ ತುಣುಕೊಂದನ್ನು ಹಂಚಿಕೊಂಡು ಶೀಘ್ರದಲ್ಲೇ ತೆರೆ ಮೇಲೆ ಬರುವುದಾಗಿ ಹೇಳಿಕೊಂಡಿದ್ದಾರೆ.
'100' ಚಿತ್ರಕ್ಕೆ U/A ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರಮಂದಿರಗಳು ತೆರೆದ ಕೂಡಲೇ ಸಿನಿಮಾ ಬಿಡುಗಡೆ ಮಾಡುವುದಾಗಿ ರಮೇಶ್ ಅರವಿಂದ್ ಹೇಳಿದ್ದಾರೆ. ತಮಿಳಿನ 'ತಿರುಟ್ಟುಪೈಲೆ' ಚಿತ್ರವನ್ನು ರಮೇಶ್ ಅರವಿಂದ್ ಕನ್ನಡಕ್ಕೆ ರೀಮೇಕ್ ಮಾಡಿದ್ದಾರೆ. ಚಿತ್ರದಲ್ಲಿ ರಮೇಶ್ ಅರವಿಂದ್ ಪತ್ನಿಯಾಗಿ ಜೋಶ್ ಬೆಡಗಿ ಪೂರ್ಣ ಹಾಗೂ ತಂಗಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸಿದ್ದಾರೆ. '100' ಚಿತ್ರವನ್ನು 'ನಾತಿಚರಾಮಿ', ಹಾಗೂ 'ಪಡ್ಡೆಹುಲಿ' ಚಿತ್ರಗಳ ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ.