ಆರ್ಎಸ್ ಪ್ರೊಡಕ್ಷನ್ನಲ್ಲಿ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡಿರುವ ರಣಂ ಚಿತ್ರದ ಆಡಿಯೋ ಹಾಗೂ ಟ್ರೇಲರ್ ಲಾಂಚ್ ಆಗಿದೆ.
ಕಲಾವಿದರ ಸಂಘದಲ್ಲಿ ನಡೆದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ, ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಗಮಿಸಿ ಚಿತ್ರದ ಆಡಿಯೋ ಮತ್ತು ಟ್ರೇಲರ್ ಲಾಂಚ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ರಣಂ ಚಿತ್ರದಲ್ಲಿ ಆ ದಿನಗಳು ಖ್ಯಾತಿಯ ನಟ ಚೇತನ್, ಚಿರಂಜೀವಿ ಸರ್ಜಾ, ಮಹಾಲಕ್ಷ್ಮಿ ಹಾಗೂ ಶರತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ರಣಂ ಚಿತ್ರವನ್ನು ಆಂಧ್ರ ಪ್ರದೇಶದ ನಿರ್ದೇಶಕ ವಿ.ಸಮುದ್ರಂ ನಿರ್ದೇಶನ ಮಾಡಿದ್ದು, ಚಿತ್ರದಲ್ಲಿ ರೈತರ ಸಮಸ್ಯೆಗಳು ಹಾಗೂ ರೈತರ ಹೋರಾಟದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿದೆಯಂತೆ. ರೈತಪರ ಹೋರಾಟಗಾರನಾಗಿ ನಟ ಚೇತನ್ ನಟಿಸಿದ್ದಾರೆ. ಹಾಗೂ ರೆಬೆಲ್ ಪೊಲೀಸ್ ಅಧಿಕಾರಿಗಳ ಪಾತ್ರದಲ್ಲಿ ಚಿರಂಜೀವಿ ಸರ್ಜಾ ಹಾಗೂ ಮಹಾಲಕ್ಷ್ಮಿ ಅಭಿನಯಿಸಿದ್ದಾರೆ.