ಚಾಲೆಂಜಿಂಗ್ ಸ್ಟಾರ್ ದರ್ಶನ್ ಎರಡು ಶೇಡ್ನಲ್ಲಿ ಕಾಣಿಸಿಕೊಂಡಿರುವ 'ರಾಬರ್ಟ್' ಸಿನಿಮಾ, ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಫಿಲಂ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಇಂದು ಮುಂಜಾನೆಯೇ ಥಿಯೇಟರ್ಗಳ ಬಳಿ ಜಮಾಯಿಸಿದ್ದರು.
ಕರ್ನಾಟಕದ 180ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6 ಗಂಟೆಯಿಂದಲೇ 'ರಾಬರ್ಟ್' ಸಿನಿಮಾ ತೆರೆಕಂಡಿದೆ. ಚಿತ್ರದ ಫಸ್ಟ್ ಡೇ, ಫಸ್ಟ್ ಶೋ ನೋಡಿ ದರ್ಶನ್ ಅಭಿನಯಕ್ಕೆ ಪ್ರೇಕ್ಷಕರು ಮನಸೋತಿದ್ದಾರೆ.
ಚಿತ್ರದಲ್ಲಿ ದರ್ಶನ್ಗೆ ನಾಯಕಿಯಾಗಿ ಆಶಾ ಭಟ್ ನಟಿಸಿದ್ದಾರೆ. ವಿನೋದ್ ಪ್ರಭಾಕರ್ ದಚ್ಚು ಗೆಳೆಯನಾಗಿ, ಖಳನಟರಾಗಿ ಜಗಪತಿ ಬಾಬು, ರವಿಶಂಕರ್ ಹಾಗು ರವಿಕಿಶನ್ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕ್ಯಾಮರಾಮ್ಯಾನ್ ಸುಧಾಕರ್ ಕೈಚಳಕವಿದ್ದು, ಅರ್ಜುನ್ ಜನ್ಯ ಸಂಗೀತವಿದೆ.
ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬಕ್ಕೆ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಟ್ಟ ಹ್ಯಾಟ್ರಿಕ್ ಹೀರೋ
ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.