ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಈ ಬಾರಿ ದಕ್ಷಿಣ ಭಾರತದ ಚಿತ್ರರಂಗದ ಕಲಾವಿದರಿಗೆ ಪ್ರಶಸ್ತಿಗಳನ್ನು ನೀಡಿದ್ದು, ವರ್ಷದ ಅತ್ಯುತ್ತಮ ಪ್ರದರ್ಶನ ವಿಭಾಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಹೈದರಾಬಾದ್ನಲ್ಲಿ ಶುಕ್ರವಾರ ಸಂಜೆ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಯಶ್ ಪ್ರಶಸ್ತಿ ಸ್ವೀಕರಿಸಿದ್ದಾರೆ. ಕಳೆದ ವರ್ಷಾಂತ್ಯದಲ್ಲಿ ತೆರೆಕಂಡು ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದ್ದ ಕೆ.ಜಿ.ಎಫ್ ಚಾಪ್ಟರ್ -1 ಚಿತ್ರದ ನಟನೆಗೆ ಸದ್ಯ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಒಲಿದು ಬಂದಿದೆ.
2018ನೇ ಸಾಲಿನ ಸೈಮಾ ಅವಾರ್ಡ್ ಪಡೆದಿದ್ದ ರಾಕಿಂಗ್ ಸ್ಟಾರ್ ಇದೀಗ ಮತ್ತೊಂದು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇನ್ನು ಕೆ.ಜಿ.ಎಫ್ ಚಾಪ್ಟರ್ -2 ಚಿತ್ರೀಕರಣ ಭರದಿಂದ ಸಾಗಿದ್ದು, ಯೋಜಿತ ದಿನಾಂಕಕ್ಕೂ ಮುನ್ನವೇ ಶೂಟಿಂಗ್ ಮುಗಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಾಲಿವುಡ್ ನಟ ಸಂಜಯ್ ದತ್ ಅಧೀರ ಪಾತ್ರದಲ್ಲಿ ನಟಿಸುತ್ತಿದ್ದಾರೆ.