ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಹಾಗೂ ಕರ್ನಾಟಕದ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ 'ಡಿಯರ್ ಕಾಮ್ರೇಡ್' ಇದೇ 26 ರಂದು ಬಿಡುಗಡೆಯಾಗುತ್ತಿದೆ.
ಚಿತ್ರದ ಪ್ರಮೋಶನ್ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ, ನಿನ್ನೆ ಬೆಂಗಳೂರಿಗೆ ಆಗಮಿಸಿತ್ತು. ಮಧ್ಯಾಹ್ನ ಮಾಧ್ಯಮಗಳ ಮುಂದೆ ಹಾಜರಾಗಿ ಸಿನಿಮಾದ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡ್ರು. ಅಲ್ಲದೆ ಸಂಜೆ ಕೊರಮಂಗಲದ ಸೆಂಟ್ ಜೋಸೆಫ್ ಕಾಲೇಜಿನ ಆಡಿಟೋರಿಯಂನಲ್ಲಿ ಕನ್ನಡದ ಸೂಪರ್ ಸ್ಟಾರ್ ಯಶ್ ಹಾಜರಾಗಿ ಚಿತ್ರದ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.