ಕೊರೊನಾದಿಂದಾಗಿ ಕನ್ನಡ ಚಲನಚಿತ್ರ ರಂಗದಲ್ಲಿ ಸಾವಿರಾರು ಕಾರ್ಮಿಕರು ಹಾಗೂ ಪೋಷಕ ವರ್ಗದ ಕಲಾವಿದರು ಕೆಲಸವಿಲ್ಲದೇ ಕಷ್ಟಪಡುತ್ತಿದ್ದಾರೆ.
ಇಂತಹ ಸಮಯದಲ್ಲಿ ಚಿತ್ರರಂಗದ ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ನೆರವಾಗುವ ಕೆಲಸ ಮಾಡುತ್ತಿದ್ದಾರೆ.
ನಟ, ನಿರ್ದೇಶಕ ಉಪೇಂದ್ರ ಸಹ ಈ ಕಾರ್ಯಕ್ಕೆ ಕೈಜೋಡಿಸಿದ್ದರು. ಇದೀಗ ಈ ಕೆಲಸಕ್ಕೆ ಹಿರಿಯ ನಟಿ ಬಿ. ಸರೋಜಮ್ಮ ಸಹ 4 ಲಕ್ಷ ರೂಪಾಯಿಗಳನ್ನು ನೀಡಿದ್ದರು.
ಹಾಗೇ ಸಂಗೀತ ನಿರ್ದೇಶಕ ಹಾಗೂ ನಟ ಸಾಧುಕೋಕಿಲ ಕೂಡ ಎರಡೂವರೆ ಲಕ್ಷ ರೂಪಾಯಿ ಮೊತ್ತದಲ್ಲಿ ದಿನಸಿ ಕಿಟ್ಗಳನ್ನು ಆರ್ಕೆಸ್ಟ್ರಾ ಕಲಾವಿದರಿಗೆ ಹಂಚಲು ಮುಂದೆ ಬಂದಿದ್ದಾರೆ.
ಅದರಂತೆ ಈಗ ಹಿರಿಯ ನಟಿ ಬಿ.ಸರೋಜಾದೇವಿ ಈಗಾಗಲೇ ಸಂಗೀತ ನಿರ್ದೇಶಕ ಸಾಧು ಕೋಕಿಲ ಮನೆಗೆ ತಲುಪಿಸಿದ್ದಾರೆ. ಈಗ ಸಾಧುಕೋಕಿಲ ಅವರು ಎಲ್ಲಾ ಸಂಗೀತ ನಿರ್ದೇಶಕರಿಗೆ, ಗಾಯಕರಿಗೆ ಈ ಆಹಾರ ಧ್ಯಾನದ ಕಿಟ್ ಕೊಡುವ ವ್ಯವಸ್ಥೆಯನ್ನ ಮಾಡಲಿದ್ದಾರೆ. ಈ ಬಗ್ಗೆ ಮಾತನಾಡಿರೋ ಸಂಗೀತ ನಿರ್ದೇಶಕ ಸಾಧುಕೋಕಿಲ, ಹಿರಿಯ ನಟಿ ಬಿ. ಸರೋಜಾದೇವಿ ಹಾಗೂ ಉಪೇಂದ್ರ ಅವರಿಗೆ ಧನ್ಯವಾದ ಹೇಳಿದ್ದಾರೆ.