ದಿನೇ ದಿನೆ ತಾಂಡವ ಆಡುತ್ತಿರುವ ಕೊರೊನಾ ವೈರಸ್ ಬಗ್ಗೆ , ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಆದರೆ ಮಹಾಮಾರಿಯಾಗಿ ಕೊರೊನಾ ರಾಜ್ಯ, ದೇಶ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಕಾಡುತ್ತಿದೆ.
ಇದೀಗ ಡೈಲಾಗ್ ಕಿಂಗ್ ಸಾಯಿ ಕುಮಾರ್ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವೈದ್ಯರು, ಪೊಲೀಸರು, ಪೌರ ಕಾರ್ಮಿಕರನ್ನು ರಾಷ್ಟ್ರೀಯ ಲಾಂಛನಕ್ಕೆ ಹೋಲಿಸಿದ್ದಾರೆ. ಇನ್ನು ಸಾಯಿಕುಮಾರ್ ಸಾರ್ವಜನಿಕರನ್ನು ನಾಲ್ಕನೇ ಸಿಂಹ ಎಂದು ಕೂಡಾ ಹೇಳಿದ್ದಾರೆ. ದಯವಿಟ್ಟು ಭಾರತ ಸರ್ಕಾರ ಹಾಗೂ ರಾಜ್ಯ ಸರ್ಕಾರ ಹೇಳಿದಂತೆ ನಾಗರಿಕರು ನಡೆದುಕೊಳ್ಳಿ ಎಂದು ಸಾಯಿ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.