ETV Bharat / sitara

ಜ.15ರಂದು ಹೈದರಾಬಾದ್​ನಲ್ಲಿ ನೆರವೇರಲಿದೆ 'ಸಲಾರ್​' ಸಿನಿಮಾ ಮುಹೂರ್ತ

author img

By

Published : Jan 14, 2021, 12:20 PM IST

ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ಸಿದ್ಧವಾಗಲಿರುವ ಸಲಾರ್ ಸಿನಿಮಾದ ಮುಹೂರ್ತ ಜ. 15ರಂದು ಹೈದರಾಬಾದ್​ನಲ್ಲಿ ನೆರವೇರಲಿದೆ.

salaar
ಸಲಾರ್

ಹೊಂಬಾಳೆ ಫಿಲಂಸ್ ಬ್ಯಾನರ್​ನಲ್ಲಿ ಸಿದ್ಧವಾಗಲಿರುವ ಸಲಾರ್ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನ ದೇಶಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿದೆ. ಇದೀಗ ಇದೇ ಚಿತ್ರತಂಡ ಸಂಕ್ರಾಂತಿ ಹಬ್ಬದ ನಿಮಿತ್ತ ಚಿತ್ರದ ಮುಹೂರ್ತವನ್ನೂ ನೆರವೇರಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಜ.15ರ ಶುಭ ಶುಕ್ರವಾರದಂದು ಚಿತ್ರದ ಮುಹೂರ್ತ ನೆರವೇರಲಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರ ಇಂಡಿಯನ್ ಸಿನಿಮಾ ಎಂದು ಚಿತ್ರನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿದೆ. ಅದರಂತೆ ಇದೀಗ ಚಿತ್ರದ ಮುಹೂರ್ತಕ್ಕೆ ತಂಡ ತಯಾರಿ ನಡೆಸಿದ್ದು, ಶುಕ್ರವಾರ ಹೈದರಾಬಾದ್​ನಲ್ಲಿ 11 ಗಂಟೆಗೆ ನೆರವೇರಲಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರ ದಂಡು ಆಗಮಿಸಲಿದೆ.

ಮುಖ್ಯ ಅತಿಥಿಯಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್ ಭಾಗವಹಿಸಲ್ಲಿದ್ದಾರೆ. ನಟ ರಾಕಿಂಗ್ ಸ್ಟಾರ್ ಯಶ್ ಈ ಮುಹೂರ್ತ ಕಾರ್ಯಕ್ರಮದಲ್ಲಿ ಇರಲಿದ್ದು, ಟಾಲಿವುಡ್​ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಸಹ ಭಾಗವಹಿಸಲಿದ್ದಾರೆ.

ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕವೇ ಸಲಾರ್ ಚಿತ್ರ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪ್ರಭಾಸ್ ಲುಕ್ ಸಹ ಅಷ್ಟೇ ಕುತೂಹಲ ಕೆರಳಿಸಿದೆ. ಇದೀಗ ತಮ್ಮ ಲುಕ್ ಬಗ್ಗೆಯೂ ಪ್ರಭಾಸ್ ಮಾತನಾಡಿದ್ದಾರೆ. ‘ಈ ಸಿನಿಮಾದ ಮುಹೂರ್ತ ಮತ್ತು ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ತುಂಬ ಕೌತುಕನಾಗಿದ್ದೇನೆ. ನನ್ನ ಲುಕ್ ಹೇಗಿರಲಿದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅಷ್ಟೇ ಉತ್ಸುಕನಾಗಿದ್ದೇನೆ" ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.