ETV Bharat / sitara

"ಜಗತ್ತನ್ನ ಬದಲಾಯಿಸಬೇಕಾದರೆ ನಾನು ನನ್ನನ್ನ ಬದಲಾಯಿಸಿಕೊಳ್ಳಬೇಕು": ಡಿವೋರ್ಸ್​ ಬಳಿಕ ಸಮಂತಾ ಪೋಸ್ಟ್​​​ - Nagachaitanya Sam divorce

ನಟ ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಫುಲ್​ ಸ್ಟಾಪ್​ ಇಟ್ಟಿರುವ ಸಮಂತಾ ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹೊಸದೊಂದು ಪೋಸ್ಟ್ ಹಾಕಿಕೊಂಡಿದ್ದಾರೆ.

actor Samantha
actor Samantha
author img

By

Published : Oct 4, 2021, 5:40 PM IST

ಹೈದರಾಬಾದ್​: ನಾಲ್ಕು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್​ ಜೋಡಿ ಸಮಂತಾ ಹಾಗೂ ನಾಗಚೈತನ್ಯ ಇದೀಗ ಡಿವೋರ್ಸ್ ಪಡೆದುಕೊಂಡಿದ್ದು, ಬೇರೆ ಬೇರೆಯಾಗಿ ಜೀವನ ನಡೆಸಲು ಇಬ್ಬರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

actor Samantha
ಟಾಲಿವುಡ್ ನಟಿ ಸಮಂತಾ

ಕಳೆದ ಮೂರು ದಿನಗಳ ಹಿಂದೆ ವಿಚ್ಛೇದನ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದು, ಇದಾದ ಬಳಿಕ ಇದೇ ಮೊದಲ ಸಲ ಸಮಂತಾ ಇನ್​​ಸ್ಟಾಗ್ರಾಂನಲ್ಲಿ ಹೊಸದೊಂದು ಪೋಸ್ಟ್​ ಹಾಕಿಕೊಂಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು..’ ಎಂದು ಬರೆದುಕೊಂಡಿದ್ದಾರೆ. ಡಿವೋರ್ಸ್​ ಪಡೆದುಕೊಳ್ಳುತ್ತಿರುವುದು ಕನ್ಫರ್ಮ್​ ಆಗ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಕೌಂಟ್​ ಹೆಸರು ಬದಲಾವಣೆ ಮಾಡಿಕೊಂಡಿರುವ ಸಮಂತಾ ಹೊಸ ಪೋಸ್ಟ್​ ಹಾಕಿಕೊಂಡಿದ್ದಾರೆ.

Samantha Instagram post
ಸಮಂತಾ ಇನ್​​​ಸ್ಟಾಗ್ರಾಂ ಪೋಸ್ಟ್​​

ಇದನ್ನೂ ಓದಿರಿ: ಡಿವೋರ್ಸ್​ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹೆಸರು ಬದಲಾಯಿಸಿಕೊಂಡ ಸಮಂತಾ!

ಯಾವ ಕಾರಣಕ್ಕಾಗಿ ಇಬ್ಬರು ವಿಚ್ಛೇದನ ಪಡೆದುಕೊಂಡಿದ್ದಾರೆಂಬುದರ ಬಗ್ಗೆ ಯಾವುದೇ ರೀತಿಯ ಮಾಹಿತಿ ಹಂಚಿಕೊಂಡಿಲ್ಲ. ಎರಡು ಕುಟುಂಬದ ಪೋಷಕರು ಇದರ ಬಗ್ಗೆ ಮಾತನಾಡಿಲ್ಲ. ಹೀಗಿರುವಾಗಲೇ ಸಮಂತಾ ಈ ರೀತಿಯ ಪೋಸ್ಟ್​ ಹಾಕಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.