ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಅವರ ಬಾಳಲ್ಲಿ ಜೂನಿಯರ್ ಚಿರು ಆಗಮನವಾಗಿದೆ.
ಮಗುವಿನ ನಿರೀಕ್ಷೆಯಲ್ಲಿದ್ದ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಕುಟುಂಬದಲ್ಲೀಗ ಸಂಭ್ರಮ ಮನೆಮಾಡಿದೆ. ಮೇಘನಾ, ನಿನ್ನೆಯಷ್ಟೇ ಕೆ.ಆರ್.ರಸ್ತೆಯಲ್ಲಿರೋ ಅಕ್ಷ ಆಸ್ಪತ್ರೆಗೆ ದಾಖಲಾಗಿದ್ದರು.
ಕುಟುಂಬಕ್ಕೆ ಹೊಸ ಸದಸ್ಯನ ಆಗಮನದ ಹಿನ್ನೆಲೆಯಲ್ಲಿ ಸರ್ಜಾ ಹಾಗೂ ಮೇಘನಾ ರಾಜ್ ಕುಟುಂಬ ಸಿಹಿ ಹಂಚಿ ಸಂಭ್ರಮಿಸಿದೆ.