ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅಲ್ಲದೇ ಹಲವು ಸಂಘಟನೆಗಳು, ಸಿನಿಮಾ ತಾರೆಯರು ಇದರ ವಿರುದ್ಧ ಧ್ವನಿ ಎತ್ತಿದ್ದಾರೆ. ಇದೀಗ ಕನ್ನಡ ಚಿತ್ರರಂಗ ಅಲ್ಲದೇ ತೆಲುಗು, ತಮಿಳು ಹಾಗು ಹಿಂದಿಯಲ್ಲಿ ಮಿಂಚುತ್ತಿರುವ ನಟಿ ಪ್ರಣಿತಾ ಸುಭಾಷ್ ಕೂಡ ಈ ಘಟನೆಯನ್ನು ವಿರೋಧಿಸಿದ್ದಾರೆ.
-
What happened in #Mysuru is definitely shocking and condemnable pic.twitter.com/kmWkJ9tFxQ
— Pranitha Subhash (@pranitasubhash) August 27, 2021 " class="align-text-top noRightClick twitterSection" data="
">What happened in #Mysuru is definitely shocking and condemnable pic.twitter.com/kmWkJ9tFxQ
— Pranitha Subhash (@pranitasubhash) August 27, 2021What happened in #Mysuru is definitely shocking and condemnable pic.twitter.com/kmWkJ9tFxQ
— Pranitha Subhash (@pranitasubhash) August 27, 2021
ಈ ಬಗ್ಗೆ ಟ್ವೀಟ್ ಮಾಡಿರುವ ಚಂದನವನದ ಬೆಡಗಿ, "ಈ ಭಯಾನಕ ಘಟನೆಯ ಬಗ್ಗೆ ತನ್ನ ವಿರೋಧವನ್ನು ವ್ಯಕ್ತಪಡಿಸಿದ್ದು. ನಾವು ಮಹಿಳೆಯರನ್ನು ದೇವತೆಯಾಗಿ ಪೂಜಿಸುವ ದೇಶಕ್ಕೆ ಸೇರಿದವರು. ರಾಕ್ಷಸರನ್ನು ಕೊಂದ ಚಾಮುಂಡಿ ದೇವಿಯ ತಾಯ್ನಾಡಿನಲ್ಲಿ ಇಂತಹ ಭಯಾನಕ ಘಟನೆ ನಡೆದಿರುವುದು ಹೃದಯ ವಿದ್ರಾವಕವಾಗಿದೆ. ಶ್ರೀಮಂತ ಸಂಸ್ಕೃತಿಗೆ ಹೆಸರಾದ ಮೈಸೂರು ನಗರದಲ್ಲಿ ಇಂತಹ ಘಟನೆ ನಡೆದಿದೆ ಎಂದು ಊಹಿಸಲೂ ಸಾಧ್ಯವಿಲ್ಲ. ಮಹಿಳೆಯರ ಮೇಲಿನ ಶೋಷಣೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು" ಎಂದು ಆಗ್ರಹಿಸಿದ್ದಾರೆ.
ಮೈಸೂರು ಅತ್ಯಾಚಾರ ಪ್ರಕರಣ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ನಟಿ ಪ್ರಣಿತಾ ಸುಭಾಷ್ ಒತ್ತಾಯಿಸಿದ್ದಾರೆ.
ಘಟನೆ ಹಿನ್ನೆಲೆ:
ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮೈಸೂರಿನಲ್ಲಿ ನಡೆದಿತ್ತು. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿತ್ತು.
ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಬಂಧಿತರು ತಮಿಳುನಾಡಿನ ಕೂಲಿ ಕಾರ್ಮಿಕರು - ಡಿಜಿಪಿ ಸೂದ್