ಕನ್ನಡ ಚಿತ್ರರಂಗದಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್ವುಡ್ ಕ್ವೀನ್ ಆಗಿ ಮರೆದ ನಟಿ ರಮ್ಯಾ ನಂತರ ರಾಜಕೀಯಕ್ಕೆ ಕಾಲಿಟ್ಟಿದ್ದರು. ಇದಾದ ನಂತರ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ಮತ್ತೆ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ಸಕ್ರಿಯ ಆಗಿರುವ ಮೋಹಕ ತಾರೆ ಸಾಮಾಜಿಕ ಜಾಲತಾಣದಲ್ಲಿ ಸಮಾಜದಲ್ಲಿ ನಡೆಯುವ ಅನ್ಯಾಯದ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡುತ್ತಿರುತ್ತಾರೆ.
ಇದೀಗ ಮೋಹಕ ತಾರೆ ರಮ್ಯಾ ಅಭಿಮಾನಿಗಳು ಖುಷಿ ಪಡುವ ಸುದ್ದಿಯೊಂದು ಹರಿದಾಡುತ್ತಿದೆ. ನಟಿ ಮತ್ತೆ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ ಎಂಬ ಗಾಳಿ ಸುದ್ದಿ ಗಾಂಧಿನಗರದ ಗಲ್ಲಿಯಲ್ಲಿ ಕೇಳಿ ಬರುತ್ತಿದೆ.
ಈ ವಿಚಾರವಾಗಿ ಸ್ವತಃ ರಮ್ಯಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎಲ್ಲೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ರಮ್ಯಾ ಈಗ ಸಿನಿಮಾ ಸಂಬಂಧಿದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ ಮತ್ತು ಮಾಧ್ಯಮಗಳ ಮುಂದೆಯೂ ಕಾಣಿಸಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ರಮ್ಯಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ನಾನು ಮತ್ತೆ ಸಿನಿಮಾ ರಂಗಕ್ಕೆ ಕಮ್‍ಬ್ಯಾಕ್ ಮಾಡುತ್ತಿದ್ದೇನೆ ಎಂಬ ಊಹಾಪೋಹಗಳು ಹರಿದಾಡುತ್ತಿರುವುದನ್ನು ಕೇಳಿದ್ದೇನೆ. ಆದರೆ, ಈ ಬಗ್ಗೆ ಎಲ್ಲೂ ಕೂಡ ವರದಿಯಾಗಿಲ್ಲ. ನಾನು ಕಳೆದ ಕೆಲವು ತಿಂಗಳುಗಳಲ್ಲಿ ಸಿನಿಮಾದ ಕೆಲ ಇಂಟ್ರಸ್ಟ್ರಿಂಗ್ ಕಥೆಗಳನ್ನ ಕೇಳಿದ್ದೇನೆ. ಎಲ್ಲವೂ ಓಕೆ. ಆದರೆ, ನನ್ನಿಂದ ಶೀಘ್ರದಲ್ಲಿಯೇ ಗುಡ್ ನ್ಯೂಸ್ ಸಿಗಲಿದೆ. ಅಲ್ಲಿಯವರೆಗೂ ನಿಮ್ಮ ಕುತೂಹಲ ಹೀಗೆ ಉಳಿಸಿಕೊಳ್ಳಿ ಎಂದು ರಮ್ಯಾ ಬರೆದುಕೊಂಡಿದ್ದಾರೆ.
ಇತ್ತೀಚೆಗೆ ನಟಿ ಅಮೂಲ್ಯ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರರು, ಅಮೂಲ್ಯ ಜೊತೆ ಸೆಲ್ಫಿಗೆ ಪೋಸ್ ನೀಡುವ ಮೂಲಕ ಗಮನ ಸೆಳೆದಿದ್ದರು. ಅಂದುಕೊಂಡಂತೆ ರಮ್ಯಾ ನಾಯಕಿಯಾಗಿ ಎಂಟ್ರಿ ಕೊಡ್ತಾರಾ? ಅಥವಾ ಸಿನಿಮಾ ನಿರ್ಮಾಪಕಿಯಾಗಿ ಕಮ್ ಬ್ಯಾಕ್ ಮಾಡ್ತಾರ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ.