ಕನ್ನಡ ಚಿತ್ರರಂಗದಲ್ಲಿ ಸಾರ್ವಕಾಲಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್-2 ಸಿನಿಮಾ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಕೊನೆಯ ಹಂತದ ಚಿತ್ರೀಕರಣ ಮಾತ್ರ ಬಾಕಿಯಿದೆ.

ಹೀಗಾಗಿ ಲಾಕ್ಡೌನ್ ಸಮಯದಲ್ಲಿ ಕೆಜಿಎಫ್-2 ಚಿತ್ರದಲ್ಲಿ ಅಧೀರನ ಪಾತ್ರ ನಿರ್ವಹಿಸುತ್ತಿರುವ ಬಾಲಿವುಡ್ ನಟ ಸಂಜಯ್ ದತ್, ಚಿತ್ರಕ್ಕಾಗಿ ವರ್ಕೌಟ್ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. 60ರ ಇಳಿ ವಯಸ್ಸಿನಲ್ಲಿಯೂ ಆ್ಯಕ್ಟೀವ್ ಆಗಿರುವ ಸಂಜಯ್ ದತ್ ನೋಡಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸದ್ಯ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಬಾಕಿಯಿದೆ. ಇದಕ್ಕಾಗಿ ನಿರ್ದೇಶಕ ಪ್ರಶಾಂತ್ನೀಲ್ ಹಾಗೂ ರಾಕಿಂಗ್ ಸ್ಟಾರ್ ಯಶ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಫ್ಯಾನ್ ಇಂಡಿಯಾ ಸಿನಿಮಾವನ್ನ ಏಕ ಕಾಲದಲ್ಲಿ ವಿದೇಶದಲ್ಲೂ ಬಿಡುಗಡೆ ಮಾಡಲು ಯೋಜನೆ ಸಿದ್ದವಾಗುತ್ತಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಸಹ ಶುರು ಮಾಡಿದ್ದಾರೆ.
ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೊತೆ ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಬಾಲಕೃಷ್ಣ, ಅನಂತ್ನಾಗ್, ಮಾಳವಿಕ ಅವಿನಾಶ್, ಶರಣ್ ಶಕ್ತಿ, ಅಚ್ಯುತ್‌ಕುಮಾರ್, ವಸಿಷ್ಠ ಎನ್ ಸಿಂಹ, ಅರ್ಚನಾ ಜೋಯಿಸ್, ರಾಮಚಂದ್ರ ರಾಜು, ಬಿ ಸುರೇಶ, ಟಿ ಎಸ್ ನಾಗಾಭರಣ, ರಾವ್ ರಮೇಶ್ ಇತರರಿದ್ದಾರೆ.