ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆ ಬಳಲುತ್ತಿರುವ ರಾಜೇಶ್ ಅವರು ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕಳೆದ ಒಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿ ರಾಜೇಶ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ರಾಜೇಶ್ ಅವರ ನಿಜನಾಮ ಮುನಿ ಚೌಡಪ್ಪ, ತಂದೆ, ತಾಯಿಗೆ ಗೊತ್ತಿಲ್ಲದೇ ಸುದರ್ಶನ ನಾಟಕ ಮಂಡಳಿ ಸೇರಿದ ಇವರು ರಂಗಭೂಮಿಯಲ್ಲಿ ವಿದ್ಯಾಸಾಗರ್ ಅಂತಲೇ ಗುರುತಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಕ್ಲಾಸ್ಗೆ ಎಂಟ್ರಿ: ಎಚ್ಚೆತ್ತು ಹಿಜಾಬ್ ತೆಗೆಸಿದ ಶಿಕ್ಷಕರು
ರಾಜೇಶ್ ಅವರು 'ದೇವರ ದುಡ್ಡು', 'ಪಿತಾಮಹ', 'ಶ್ರೀರಾಮಾಂಜನೇಯ ಯುದ್ದ', 'ಪ್ರತಿಧ್ವನಿ' ಹೀಗೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಆಸ್ಪತ್ರೆ ವೈದರ ಪ್ರಕಾರ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.