ETV Bharat / sitara

ಮಾ. 19ರಂದು ಕಸ್ತೂರಿ ಮಹಲ್ ಚಿತ್ರದ ಲಿರಿಕಲ್ ಹಾಡು ರೀಲಿಸ್​ - Shanvi Srivastav

ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್​ನಲ್ಲಿ ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ತೆರೆಗೆ ಬರಲು ಸಿದ್ಧವಾಗಿರುವ ಸಿನಿಮಾದ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್​ ಮಾಡಿಕೊಂಡಿದೆ.

cdsdsd
ಮಾರ್ಚ್ 19ಕ್ಕೆ ಶ್ವಾನಿಯ ಕಸ್ತೂರಿ ಮಹಲ್ ಚಿತ್ರದ ಲಿರಿಕಲ್ ಹಾಡು ರೀಲಿಸ್​
author img

By

Published : Mar 13, 2021, 10:55 PM IST

ಬೆಂಗಳೂರು: ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್ ಸಿನಿಮಾದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ಧವಾಗಲಿದೆ.

ಮೇ ಅಥವಾ ಜೂನ್ ಮೊದಲ ವಾರದಲ್ಲಿ ಕಸ್ತೂರಿ ಮಹಲ್ ತೆರೆ ಕಾಣಲಿದೆ. ಇದೇ 19ರಂದು A2 ಮ್ಯೂಸಿಕ್ ಮೂಲಕ ಈ ಚಿತ್ರದ ಲಿರಿಕಲ್ ಹಾಡು ಬಿಡುಗಡೆಯಾಗಲಿದೆ. ವಿ.ನಾಗೇಂದ್ರ ಪ್ರಸಾದ್ ಬರೆದಿರುವ ನಾನ್ಯಾರು ನನಗೆ ಯಾರು ಎಂಬ ಈ ಹಾಡನ್ನು ಅನುರಾಧಾ ಭಟ್ ಹಾಡಿದ್ದಾರೆ. ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಬಿಡುಗಡೆ ಮಾಡಿ, ಮೆಚ್ಚುಗೆ ಸೂಚಿಸಿದ್ದ ಈ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್, ಅಕ್ಷರ್ ಮುಂತಾದವರಿದ್ದಾರೆ. ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ. ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್.ಸಿ. ಹಾಗೂ ಅಕ್ಷಯ್ ಸಿ.ಎಸ್. ಅವರ ಸಹ ನಿರ್ಮಾಣವಿದೆ. ಪಿ.ಕೆ.ಹೆಚ್. ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಸಂಕಲನ ಚಿತ್ರಕ್ಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.