ETV Bharat / sitara

ಮಾ.27ಕ್ಕೆ KGF-2 ಚಿತ್ರದ ಟ್ರೈಲರ್ ಬಿಡುಗಡೆ ಮಾಡ್ತಾರೆ ಕರುನಾಡ ಚಕ್ರವರ್ತಿ-ಕರಣ್ ಜೋಹರ್! - ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಬಿಡುಗಡೆ

ಕೆಜಿಎಫ್ ಚಿತ್ರತಂಡದ ಮೂಲಗಳ ಪ್ರಕಾರ, ವಿಶ್ವದಾದ್ಯಂತ 7500 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಮಾಪಕ ವಿಜಯ್ ಕಿರಗಂದೂರು ಪ್ಲಾನ್​ ಮಾಡಿದ್ದಾರಂತೆ‌. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ ತೆಲುಗು ಹಾಗು ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ..

shivaraj-kumar-and-karan-johar-will-inaugurate-kgf-chapter-2-trailer
ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ‌ ಕರುನಾಡ ಚಕ್ರವರ್ತಿ - ಕರಣ್ ಜೋಹರ್
author img

By

Published : Mar 25, 2022, 7:27 PM IST

ಕನ್ನಡ ಚಿತ್ರರಂಗ ಅಲ್ಲದೇ ಇಡೀ ವಿಶ್ವವೇ ಎದುರು ನೋಡುತ್ತಿರುವ ಹೈ ಎಕ್ಸ್​ಪೆಕ್ಟೆಡ್ ಸಿನಿಮಾ ಕೆಜಿಎಫ್ ಚಾಪ್ಟರ್-2. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ನಿರ್ದೇಶನದ ಹಾಗೂ ವಿಜಯ್ ಕಿರಗಂದೂರ್ ನಿರ್ಮಾಣದ ಬಹುಕೋಟಿ ವೆಚ್ಚದ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಮಾಡೋದಿಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಇದೇ ಮಾರ್ಚ್ 27ರಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ನಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯ ವರ್ಷನ್ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ. ಕನ್ನಡ ಚಿತ್ರರಂಗದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹಾಗೂ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ಅವರು ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ‌. ಈ ವಿಷಯವನ್ನು ಚಿತ್ರತಂಡ ಆಫಿಶಿಯಲ್​ ಆಗಿ ಅನೌನ್ಸ್​ ಮಾಡಿದೆ.

ಇನ್ನು ಮಾರ್ಚ್ 27ರ ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕೆಜಿಎಫ್ ಚಾಪ್ಟರ್ 2 ಸಿನಿಮಾದ ನಟರಾದ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.

450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ : ಕೆಜಿಎಫ್ 2 ಸಿನಿಮಾ ಏಪ್ರಿಲ್ 14ರಂದು ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದೆ. ಕೆಜಿಎಫ್ ಚಿತ್ರತಂಡದ ಮೂಲಗಳ ಪ್ರಕಾರ, ವಿಶ್ವದಾದ್ಯಂತ 7500 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಮಾಪಕ ವಿಜಯ್ ಕಿರಗಂದೂರು ಪ್ಲಾನ್​ ಮಾಡಿದ್ದಾರಂತೆ‌. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ ತೆಲುಗು ಹಾಗೂ ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ.

ಇದರ ಜೊತೆಗೆ ಅಮೆರಿಕಾ, ಆಸ್ಟ್ರೇಲಿಯಾ, ಜಪಾನ್, ಇಂಗ್ಲೆಂಡ್, ದುಬೈ ಹೀಗೆ 70ಕ್ಕೂ ಹೆಚ್ಚು ವಿದೇಶಗಳಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆ ಆಗುತ್ತಿದೆ. ಈಗಾಗಲೇ ಕೆಜಿಎಫ್ ಚಾಪ್ಟರ್ 2 ಸಿನಿಮಾಕ್ಕೆ ಭಾರಿ ಬೇಡಿಕೆ ಬಂದಿದ್ದು, ಡಿಜಿಟಲ್ ರೈಡ್ಸ್ 30 ಕೋಟಿಗೂ ಹೆಚ್ಚು ರೂಪಾಯಿಗೆ ಮಾರಾಟ ಆಗಿದೆ ಅಂತಾ ಹೇಳಲಾಗುತ್ತಿದೆ.

2ನೇ ದಿನಕ್ಕೆ ನೂರು ಕೋಟಿ ಕಲೆಕ್ಷನ್‌ ಸೂಚನೆ : ಇನ್ನು ಚಿತ್ರಮಂದಿರದ ಮಾಲೀಕರು ಕೆಜಿಎಫ್ ಚಾಪ್ಟರ್ 2 ಸಿನಿಮಾ ಹಾಕೋದಿಕ್ಕೆ ಮುಗಿಬಿದ್ದಿದ್ದಾರೆ‌ ಎನ್ನಲಾಗಿದೆ. ಇದರ ಜೊತೆಗೆ ಏಳು ಕೋಟಿಗೆ ಆಡಿಯೋ ರೈಟ್ಸ್ ಮಾರಾಟ ಆಗಿದ್ದು, ಈಗಾಗಲೇ ಚಿತ್ರತಂಡ ಹಾಕಿದ ಬಂಡವಾಳ ಬಂದಿದೆ ಅಂತಾ ಗಾಂಧಿನಗರದಲ್ಲಿ ಹೇಳಲಾಗಿದೆ. ಇನ್ನು ರಿಲೀಸ್ ಆಗಿ 2ನೇ ದಿನಕ್ಕೆ ನೂರು ಕೋಟಿ ಕಲೆಕ್ಷನ್‌ ಮಾಡುವ ಸೂಚನೆ ಇದೆ ಅಂತಾ ಹೇಳಲಾಗಿದೆ. ಕೆಜಿಎಫ್ ಚಾಪ್ಟರ್ 2 ಸಿನಿಮಾ ಬಿಡುಗಡೆ ಆದ ಮೇಲೆ ಹಲವು ದಾಖಲೆಗಳನ್ನ ಮಾಡೋದು ಪಕ್ಕಾ ಅಂತಿದೆ ಗಾಂಧಿನಗರ.

ಓದಿ: ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.