ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರವನ್ನು ‘ಅಧ್ಯಕ್ಷ’, ‘ಮುಕುಂದ ಮುರಾರಿ’, ‘ಪೊಗರು’ ಚಿತ್ರಗಳ ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡ್ತಿದ್ದಾರೆ. ಈಗ ಹೆಸರಿಡದ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಹೊಸಪೇಟೆ ಬಳಿಯ ಮುನಿರಾಬಾದ್ನ ಹುಲಿಗೆಮ್ಮ ದೇವಿ ಸನ್ನಿಧಿಯಲ್ಲಿ ನೆರವೇರಿಸಲಾಯಿತು.
ಕೊರೊನಾ ಹಾವಳಿ ಕಡಿಮೆ ಆದ ಮೇಲೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನಡೆಯಲಿದೆ. ಗುಜ್ಜಲ್ ಪುರುಷೋತ್ತಮ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇವರು ಟಗರು ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದರು.
ಇದು ಪುರುಷೋತ್ತಮ್ ‘ಗುಜ್ಜಲ್ ಟಾಕೀಸ್’ ಲಾಂಛನದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ನೀಡುತ್ತಿದ್ದು, ಶೇಖರ್ ಚಂದ್ರು ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆಯುತ್ತಿದ್ದಾರೆ.