ಪ್ರಭಾಸ್ ಮತ್ತು ಶ್ರುತಿ ಹಾಸನ್ ಅಭಿನಯದ, ಪ್ರಶಾಂತ್ ನೀಲ್ ನಿರ್ದೇಶನದ ಹೈ ವೋಲ್ಟೇಜ್ ಚಿತ್ರ ಸಲಾರ್. ನಟಿ ಶ್ರುತಿ ಹಾಸನ್ ಅವರ ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಅವರ ಮುಂಬರುವ ಸಲಾರ್ ಚಿತ್ರದ ಶ್ರುತಿ ಹಾಸನ್ ಫಸ್ಟ್ ಲುಕ್ ಅನ್ನು ರಿವೀಲ್ ಮಾಡಿದ್ದಾರೆ.
ನಿರ್ದೇಶಕ ಪ್ರಶಾಂತ್ ನೀಲ್ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶ್ರುತಿ ಹಾಸನ್ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಪ್ರಭಾಸ್ ಜೊತೆಯಾಗಿ ಆದ್ಯ ಪಾತ್ರದಲ್ಲಿ ಶ್ರುತಿ ಹಾಸನ್ ನಟಿಸಲಿದ್ದಾರೆ ಎಂದು ಪೋಸ್ಟರ್ ಬಹಿರಂಗಪಡಿಸಿದೆ.
"ಜನ್ಮದಿನದ ಶುಭಾಶಯಗಳು @ ಶ್ರುತಿ ಹಾಸನ್ # ಸಲಾರ್‌ನ ಭಾಗವಾಗಿದ್ದಕ್ಕಾಗಿ ಮತ್ತು ಸಿನಿಮಾ ಸೆಟ್ನಲ್ಲಿ ಬಣ್ಣದ ಕಳೆ ತಂದಿದ್ದಕ್ಕಾಗಿ ಧನ್ಯವಾದಗಳು!'' ಎಂದು ನಿರ್ದೇಶಕ ಪ್ರಶಾಂತ್ ನೀಲ್ ಅವರು ಶ್ರುತಿ ಹಾಸನ್ ಫೋಟೋದೊಂದಿಗೆ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಶೋನಿಂದ ಉಮರ್ ರಿಯಾಜ್ ಎಲಿಮಿನೇಟ್: ಹಿಮಾಂಶಿ ಖುರಾನಾ ಅಸಮಾಧಾನ
ಕೆಜಿಎಫ್ ಚಾಪ್ಟರ್ 1 ಮತ್ತು ಕೆಜಿಎಫ್ 2ನ ನಿರ್ಮಾಪಕ ಮತ್ತು ನಿರ್ದೇಶಕರಿಂದ ಬರುತ್ತಿರುವ ಮತ್ತೊಂದು ಚಿತ್ರ ಸಲಾರ್. ಸಿನಿಮಾದ ಬಿಡುಗಡೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಸದ್ಯ ನಟಿ ಶ್ರುತಿ ಹಾಸನ್ ಫಸ್ಟ್ ಲುಕ್ ರಿವೀಲ್ ಮಾಡಿ ನಿರ್ದೇಶಕ ಪ್ರಶಾಂತ್ ನೀಲ್ ಅಭಿಮಾನಿಗಳಿಗೆ ಸರ್ಪೈಸ್ ನೀಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ