ETV Bharat / sitara

'ನಟ ಭಯಂಕರ' ಪೋಸ್ಟರ್ ರಿಲೀಸ್​ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ - pratham nata bhayankara

'ನಟ ಭಯಂಕರ' ಸಿನಿಮಾದ ಪೋಸ್ಟರ್ ಅನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಬಿಡುಗಡೆ ಮಾಡಿದ್ದಾರೆ.

siddaramaiah released nata bhayankara film poster
'ನಟ ಭಯಂಕರ' ಪೋಸ್ಟರ್ ರಿಲೀಸ್​ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Feb 24, 2022, 1:25 PM IST

ಬಿಗ್ ಬಾಸ್ ಸ್ಪರ್ಧಿ ಪ್ರಥಮ್ ನಟಿಸಿ, ನಿರ್ದೇಶನ ಮಾಡಿರುವ ಚಿತ್ರ ನಟ ಭಯಂಕರ. ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾದ ಪೋಸ್ಟರ್ ಅನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಬಿಡುಗಡೆ ಮಾಡಿದರು. ಇದೇ ವೇಳೆ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ನಂತರ ಮಾತನಾಡಿದ ನಟ ಪ್ರಥಮ್, ನಾನು ನಿರ್ದೇಶಕನಾಗಿ, ನಟನಾಗಿ ಸಿನಿಮಾ ಮಾಡ್ತಿರುವುದರಿಂದ ನಿಮ್ಮ ಸಿನಿಮಾ ನೋಡೇ ನೋಡ್ತೀನಿ ಎಂದು ಸಿದ್ದರಾಮಯ್ಯ ಸರ್​ ತಿಳಿಸಿದ್ದಾರೆ ಎಂದು ಹೇಳಿದರು.

'ನಟ ಭಯಂಕರ' ಪೋಸ್ಟರ್ ರಿಲೀಸ್ - ಪ್ರತಿಕ್ರಿಯೆ

ಚಿತ್ರಕ್ಕೆ ಸುಶ್ಮಿತಾ ಜೋಷಿ ಹೀರೋಯಿನ್‌ ಆಗಿದ್ದಾರೆ. ಹಿರಿಯ ನಟ ಸಾಯಿಕುಮಾರ್ ನಟಿಸಿದ್ದಾರೆ. ಓಂ ಪ್ರಕಾಶ್ ರಾವ್, ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: 'ಏಕ್ ಲವ್ ಯಾ' ಸಿನಿಮಾ ನೋಡಿ ಮೆಚ್ಚಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಉದಯ್ ಕೆ.ಮೆಹ್ತಾ ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿ ಪ್ರಥಮ್ ಅವರದ್ದಾಗಿದೆ. ನಾಲ್ಕು ಹಾಡುಗಳಿರುವ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.

ಡಾ.ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಡುಗಳನ್ನು ರಚಿಸಿದ್ದಾರೆ. ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹೆಚ್.ಪಿ.ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.