ETV Bharat / sitara

ಚಂದನವನಕ್ಕೆ ಎಂಟ್ರಿಕೊಟ್ಟ ಮತ್ತೊಬ್ಬ ರಾಜಕೀಯ ಮುಖಂಡನ ಪುತ್ರ; ಸಿಂಪಲ್ ಸುನಿ ಗರಡಿಯಲ್ಲಿ 'ಗತವೈಭವ'

ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಗೀತ ನಿರ್ದೇಶಕ ಭರತ್ ಬಿ.ಜೆ, ಸಂಕಲನಕಾರ ಆಶಿಕ್, ಕಲಾ ನಿರ್ದೇಶಕ ಶಿವಕುಮಾರ್, ವಿಎಫ್​ಎಕ್ಸ್​ ಸೂಪರ್​​ವೈಸರ್ ನಿರ್ಮಲ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಚೇತನ್ ಡಿಸೋಜ ಅವರು ನೀಡಲಿದ್ದಾರೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ 'ಗತವೈಭವ' ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಏಪ್ರಿಲ್ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ.

Simple Suni Announced New Movie With Dushyanth Srinivas
ಯುವ ನಟ ದುಶ್ಯಂತ್
author img

By

Published : Mar 1, 2022, 6:05 PM IST

ಸರಳ ಕಥೆ ಹೇಳುವ ಮೂಲಕ ಸಿನಿ ಪ್ರಿಯರ ಮನ ಗೆದ್ದಿರುವ ಚಂದನವನದ ನಿರ್ದೇಶಕ ಸಿಂಪಲ್ ಸುನಿ ಹೊಸ ಹುಡುಗರನ್ನು ಪರಿಚಯ ಮಾಡುವುದರಲ್ಲಿ ಸಿದ್ಧಹಸ್ತರು. ಈಗ ಈ ಸಾಲಿಗೆ ದುಶ್ಯಂತ್ ಸೇರ್ಪಡೆಯಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್​​ನಲ್ಲಿ 'ಗತವೈಭವ' ಎಂಬ ಚಿತ್ರ ಮೂಡಿಬರುತ್ತಿದ್ದು, ಚಿತ್ರದ ಟೀಸರ್​ ಬಿಡುಗಡೆಯಾಗಿದೆ.

Simple Suni Announced New Movie With Dushyanth Srinivas
ಯುವ ನಟ ದುಶ್ಯಂತ್

ಇತ್ತೀಚೆಗಷ್ಟೇ ಚಿತ್ರದ ಕುರಿತು ಸಮಾರಂಭ ಹಾಗೂ ಮಾಧ್ಯಮಗೋಷ್ಟಿ ನಡೆಸಲಾಯಿತು. ಈ ವೇಳೆ ಗುಬ್ಬಿ ಶಾಸಕ ಶ್ರೀನಿವಾಸ್, ಲಹರಿ ವೇಲು, ನಿರ್ಮಾಪಕ ಪುಷ್ಕರ್, ನಿರ್ದೇಶಕರಾದ ಪವನ್ ಒಡೆಯರ್, ಮಹೇಶ್ ಕುಮಾರ್ ಹಾಗೂ ವಿತರಕ ಸುಪ್ರೀತ್ ತಮ್ಮ ಪ್ರೋತ್ಸಾಹದ ಮಾತುಗಳ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದರು.

ಮೊದಲಿಗೆ ಮಾತನಾಡಿದ ಯುವ ನಟ ದುಶ್ಯಂತ್ ತಮ್ಮ ಪರಿಚಯದ ಜೊತೆಗೆ ಸಿನಿಮಾ ಬಗ್ಗೆ ಇದ್ದ ಕಾಳಜಿ ಬಗ್ಗೆ ಹೇಳಿಕೊಂಡರು. ನಾನು ಮೂಲತಃ ತುಮಕೂರಿನವನು. ವಿದೇಶದಲ್ಲಿ ಎಲ್​ಎಲ್​ಬಿ ಓದಿದ್ದೇನೆ. ಆದರೆ, ಅಭಿನಯದಲ್ಲಿ ಆಸಕ್ತಿ ಹೆಚ್ಚಿತ್ತು. ಇದಕ್ಕೆ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದವರೇ ಅಪ್ಪು ಸಾರ್​. ಹಾಗಾಗಿ ಅವರನ್ನು ಯಾವತ್ತೂ ಮರೆಯುವುದಿಲ್ಲ ಎಂದರು.

ಈ ಚಿತ್ರದ ಟೀಸರ್ ಕಳೆದ ವರ್ಷವೇ ಸಿದ್ಧವಾಗಿತ್ತು. ಮೊದಲು ನಾವು ತೋರಿಸಿದ್ದೇ ಅಪ್ಪು ಸಾರ್​ಗೆ. ಚಿತ್ರರಂಗಕ್ಕೆ ಬರುವವರಿಗೆ ಕಾಲೆಳೆಯುವವರೇ ಹೆಚ್ಚು. ಆದರೆ, ನಿನಗೆ ಒಳ್ಳೆಯ ಭವಿಷ್ಯವಿದೆ. ಚಿತ್ರದಲ್ಲಿ ನಟಿಸು ಎಂದು ನನಗೆ ಅವರು ಧೈರ್ಯ ತುಂಬಿದ್ದರು. ಅಪ್ಪು ಅವರ ಮಾತುಗಳು ನನಗೆ ಸ್ಫೂರ್ತಿ. ನಾನು ವಿದೇಶದಲ್ಲಿ ಓದುತ್ತಿದ್ದಾಗ ಕನ್ನಡಿ ಮುಂದೆ ನಿಂತು ನಟನಂತೆ ಅಭಿನಯಿಸುತ್ತಿದ್ದೆ.

ಹಣ ಹೊಂದಿಸಲು ಒಂದು ವರ್ಷ ಬೇಕಾಯಿತು: ಬನ್ನೇರುಘಟ್ಟದ ಬಳಿ ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸುವ ನಾಟಕವೊಂದಕ್ಕೆ ಹೋದಾಗ ಕಲಾವಿದರೆಲ್ಲಾ ಒಂದು ಕಡೆ ಬನ್ನಿ ಎಂದರು. ಅವರು ಕಲಾವಿದ ಅಂದ ತಕ್ಷಣ ನನ್ನ ಮನಸ್ಸಿನಲ್ಲಿ ನಟನಾಗಬೇಕೆಂಬ ಹಂಬಲ ಹೆಚ್ಚಾಯಿತು.‌ ನಂತರ ಅಭಿನಯಕ್ಕೆ ಬೇಕಾದ ತರಬೇತಿ ಪಡೆದೆ. ನನ್ನ ಸ್ನೇಹಿತರೊಬ್ಬರ ಮೂಲಕ ಸುನಿ ಅವರ ಪರಿಚಯವಾಯಿತು. ಬಳಿಕ ಕಥೆ ಸಿದ್ಧವಾಯಿತು. ಆ ಬಳಿಕ ನಿರ್ಮಾಪಕರ ಹುಡುಕಾಟ ಆರಂಭವಾಯಿತು ಎಂದು ಚಿತ್ರದ ಬಗ್ಗೆ ತಾವು ಕಂಡ ಕನ್ನಡ ಚಿತ್ರರಂಗದ ಬಗ್ಗೆ ವಿವರಣೆ ನೀಡಿದರು.

ಗತವೈಭವ ಚಿತ್ರ ತಂಡ

ದುಡ್ಡಿರುವವರ ಮಕ್ಕಳು ಹೀರೋ ಆಗುತ್ತಾರೆ ಅನ್ನೋದು ಕೆಲವರ ಮಾತು. ನಾನು ಗುಬ್ಬಿ ಶಾಸಕ ಶ್ರೀನಿವಾಸ್ ಅವರ ಪುತ್ರ. ಆದರೆ, ನಮ್ಮ ತಂದೆಗೆ ನಾನು ಚಿತ್ರರಂಗಕ್ಕೆ ಬರಲು ಇಷ್ಟವಿಲ್ಲ. ನನಗೆ ಇದಲ್ಲದೆ ಬೇರೆ ಇಷ್ಟವಿಲ್ಲ. ಹಾಗಾಗಿ, ನಾನು ನಿರ್ಮಾಪಕರನ್ನು ಹುಡುಕಿ ಹಣ ಹೊಂದಿಸಲು ಒಂದು ವರ್ಷಕ್ಕೂ ಅಧಿಕ ಸಮಯ ತೆಗೆದುಕೊಂಡೆ ಎಂದರು ದುಶ್ಯಂತ್.

ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ: ನಾವು ರಾಜಕೀಯ ವ್ಯಕ್ತಿಗಳು. ನಿಮಗಿಂತ ಚೆನ್ನಾಗಿ ನಟನೆ ಮಾಡುತ್ತೇವೆ. ಆದರೆ, ನಾನು ನನ್ನ ಮಗನನ್ನು ಬೆಳೆಸಿದ ರೀತಿಯೇ ಬೇರೆ. ಅವನ ಆಯ್ಕೆಯೇ ಬೇರೆ. ಚುನಾವಣೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ನನಗೆ ಸಿನಿಮಾ ನಿರ್ಮಾಣ ದೊಡ್ಡ ವಿಷಯವಲ್ಲ. ಆದರೆ, ನನಗಿಷ್ಟವಿಲ್ಲದ ಕೆಲಸಕ್ಕೆ ನಾನು ಕೊಡಲ್ಲ. ಈ ಚಿತ್ರತಂಡ ನೋಡಿದರೆ ಸಂತೋಷವಾಗುತ್ತಿದೆ. ನನ್ನ ಮಗನಿಂದ ಒಳ್ಳೆಯದು ಆಗದಿದ್ದರೂ ಪರವಾಗಿಲ್ಲ, ಯಾರಿಗೂ ಕೆಟ್ಟದಾಗುವುದು ಬೇಡ ಎಂದರು ಗುಬ್ಬಿ ಶಾಸಕ ಶ್ರೀನಿವಾಸ್.

ನಿರ್ಮಾಪಕ ದೀಪಕ್ ತಿಮ್ಮಪ್ಪ ಹಾಗೂ ಸಿಂಪಲ್ ಸುನಿ

ದುಶ್ಯಂತ್​ಗೆ ಸ್ಟೇಜ್ ಫಿಯರ್ ಇಲ್ಲ: ಗತವೈಭವ‌ ಎಂದರೆ ಗತಿಸಿ ಹೋದ ವೈಭವ ಎಂದರ್ಥ. ಈ ನಮ್ಮ ಚಿತ್ರದಲ್ಲಿ ವಾಸ್ಕೋಡಿಗಾಮನ ಕಥೆ ಸೇರಿದಂತೆ ಕೆಲವು ಐತಿಹಾಸಿಕ ಸನ್ನಿವೇಶಗಳಿರುತ್ತವೆ. ಫನ್, ಸೆಂಟಿಮೆಂಟ್ ಹಾಗೂ ಮೈಂಡ್ ಗೇಮ್​​ನ ಮಿಶ್ರಣ ಅನ್ನಬಹುದು. ದುಶ್ಯಂತ್​ಗೆ ಸ್ಟೇಜ್ ಫಿಯರ್ ಇಲ್ಲ. ಟೀಸರ್​​ನಲ್ಲಿ ಆತನ ಅಭಿನಯಕ್ಕೆ ಹಾಗೂ ಧ್ವನಿಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿದೆ. ಏಪ್ರಿಲ್ ಕೊನೆಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಸಿಂಪಲ್ ಸುನಿ ಹೇಳಿದರು.

ನಾನು ದುಶ್ಯಂತ್ ಅಕ್ಕ-ಪಕ್ಕದ ಮನೆಯವರು. ಸುಮಾರು 20 ವರ್ಷಗಳ ಪರಿಚಯ.‌ ದುಶ್ಯಂತ್ ನನ್ನ ಬಳಿ ಈ ವಿಷಯ ಹೇಳಿದಾಗ ನಿರ್ಮಾಣಕ್ಕೆ ಮುಂದಾದೆ. ನನ್ನೊಂದಿಗೆ ಸುನಿ ಸಹ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ ನಿರ್ಮಾಪಕ ದೀಪಕ್ ತಿಮ್ಮಪ್ಪ ತಿಳಿಸಿದರು.

ಛಾಯಾಗ್ರಾಹಕ ವಿಲಿಯಂ ಡೇವಿಡ್, ಸಂಗೀತ ನಿರ್ದೇಶಕ ಭರತ್ ಬಿ.ಜೆ, ಸಂಕಲನಕಾರ ಆಶಿಕ್, ಕಲಾ ನಿರ್ದೇಶಕ ಶಿವಕುಮಾರ್, ವಿಎಫ್​ಎಕ್ಸ್​ ಸೂಪರ್​​ವೈಸರ್ ನಿರ್ಮಲ್ ಕುಮಾರ್ ಹಾಗೂ ಸಾಹಸ ನಿರ್ದೇಶಕ ಚೇತನ್ ಡಿಸೋಜ ಅವರು ನೀಡಲಿದ್ದಾರೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.