ETV Bharat / sitara

ಪ್ಯಾನ್ ಇಂಡಿಯಾ 'ಮಡ್ಡಿ' ಸಿನಿಮಾಗೆ ಸೌತ್ ಸ್ಟಾರ್​ಗಳ ಸಾಥ್ - fan india movie maddi

'ಮಡ್ಡಿ' ಸಿನಿಮಾಗೆ 13 ಕ್ಯಾಮರಾಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. 'ರಾಕ್ಷಸನ್' ಸಿನಿಮಾ ಖ್ಯಾತಿಯ ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಈ ಸಿನಿಮಾ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

maddi-film-team
ಮಡ್ಡಿ ಸಿನಿಮಾ
author img

By

Published : Dec 3, 2021, 6:56 PM IST

ಹೊಸ ಕಾನ್ಸೆಪ್ಟನೊಂದಿಗೆ, ಒಳ್ಳೆಯ ತಂತ್ರಜ್ಞರ ತಂಡ ಇಟ್ಕೊಂಡು ಸ್ಯಾಂಡಲ್​ವುಡ್​ಗೆ ಎಂಟ್ರಿಯಾಗಿರುವ ಹೊಸಬರ 'ಮಡ್ಡಿ' ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಾಲಿವುಡ್ ನಟ ವಿಜಯ್ ಸೇತುಪತಿ, ಕನ್ನಡದಲ್ಲಿ ಶ್ರೀಮುರಳಿ, ಬಾಲಿವುಡ್ ನಟ ಅರ್ಜುನ್ ಕಪೂರ್ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಹಲವು ಭಾಷೆಗಳ ಟೀಸರ್​ನ್ನು ಶಿವರಾಜಕುಮಾರ್, ಫಹಾದ್ ಪಾಸಿಲ್, ಉನ್ನಿ ಮುಕುಂದನ್, ಅಪರ್ಣ ಬಾಲಮುರಳಿ ಸೇರಿದಂತೆ ಹಲವು ಸ್ಟಾರ್ ನಟರು ನೋಡಿ ಚಿತ್ರತಂಡಕ್ಕೆ ಸಪೋರ್ಟ್ ಮಾಡಿದ್ದಾರೆ.

south film starts support to maddi film team
'ಮಡ್ಡಿ' ಸಿನಿಮಾಗೆ ಸೌತ್ ಸ್ಟಾರ್​ಗಳ ಸಾಥ್

ಯುವ ಕಲಾವಿದರಾದ, ಯುವನ್, ರಿಧಾನ್ ಕೃಷ್ಣ, ಅನುಷಾ ಸುರೇಶ್, ಅಮಿತ್ ಶಿವದಾಸ್ ನಾಯರ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇದರ ಜೊತೆಗೆ ಹರೀಶ್ ಪೆರಾಡಿ, ವಿಜಯನ್, ರೆಂಜಿ ಪೆನಿಕರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿದ್ದಾರೆ‌. ಈ ಚಿತ್ರದ ಕಲಾವಿದರೆಲ್ಲ ಯಾವುದೇ ಡ್ಯೂಪ್ ಬಳಸದೇ ಹಲವು ಶೈಲಿಯ ಮಡ್​ ರೇಸ್​ನಲ್ಲಿ ಪರಿಣತಿ ಪಡೆದಿದ್ದಾರೆ.

ಮಡ್ಡಿ ಮೂಲಕ ಯುವ ಪ್ರತಿಭೆಗಳು ಭಾರತೀಯ ಚಿತ್ರರಂಗಕ್ಕೆ ಎಂಟ್ರೀ

ಒಟ್ಟು 13 ಕ್ಯಾಮರಾಗಳನ್ನು ಶೂಟಿಂಗ್​ನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. 'ರಾಕ್ಷಸನ್' ಸಿನಿಮಾ ಖ್ಯಾತಿಯ ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ.

ಮಡ್ ರೇಸ್​ ಬಗ್ಗೆ ಕುತೂಹಲ ಹುಟ್ಟಿಸುವ ಮಡ್ಡಿ ಸಿನಿಮಾ

ಕಳೆದ ಐದು ವರ್ಷಗಳ ಕಾಲ ಮಡ್ ರೇಸ್​ ಬಗ್ಗೆ ಅಧ್ಯಯನ ನಡೆಸಿ ಈ ಸಿನಿಮಾ ಮಾಡಿರುವ ಪ್ರಗ್ಬಲ್​, ಎರಡು ತಂಡಗಳ ನಡುವಿನ ಸ್ಪರ್ಧೆಯನ್ನು ಮಡ್ಡಿ ಸಿನಿಮಾದಲ್ಲಿ ತೋರಿಸಿದ್ದಾರೆ. ಇದರ ಜತೆಗೆ ಫ್ಯಾಮಿಲಿ ಸೆಂಟಿಮೆಂಟ್, ಭಾವನಾತ್ಮಕ ಅಂಶಗಳು ಮತ್ತು ಅಡ್ವೆಂಚರಸ್​ ತಿರುವುಗಳನ್ನೂ ಈ ಸಿನಿಮಾದಲ್ಲಿ ಮಿಶ್ರಣ ಮಾಡಿದ್ದಾರೆ.

ನೈಜ ಅರಣ್ಯ ಪ್ರದೇಶದಲ್ಲಿ ಇಡೀ ಸಿನಿಮಾದ ಶೂಟಿಂಗ್ ಆಗಿದ್ದು, ಸಿಂಕ್ ಸೌಂಡ್ ಟೆಕ್ನಾಲಜಿ ಬಳಸಿ ಸಿನಿಮಾ ಮೂಡಿ ಬಂದಿದೆ. ಈ ಹಿಂದೆ ಈ ಚಿತ್ರದ ಟೀಸರ್ ಅನ್ನು ಹಲವು ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಟೀಸರ್ ಬಿಡುಗಡೆ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿಕೆ7 ಪ್ರೊಡಕ್ಷನ್ಸ್ ಹೌಸ್ ಅಡಿ ಪ್ರೇಮ್ ಕೃಷ್ಣ ದಾಸ್ ನಿರ್ಮಾಣದಲ್ಲಿ ಡಾ. ಪ್ರಗ್ಬಲ್ ದಾಸ್ ನಿರ್ದೇಶನದ ಮೊದಲ ಹೆಜ್ಜೆ.

ಈ ಚಿತ್ರದ ಮೊದಲ ಟೀಸರ್ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆ ಆಗಿದ್ದು, ಅಭೂತಪೂರ್ವ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಅದೇ ರೀತಿ ಚಿತ್ರಕ್ಕೆ ಒಟಿಟಿಯಿಂದಲೂ ಬೇಡಿಕೆ ಬಂದಿದ್ದು, ಒಟಿಟಿ ತ್ಯಜಿಸಿ ಚಿತ್ರಮಂದಿರದಲ್ಲಿಯೇ ಸಿನಿಮಾ ರಿಲೀಸ್ ಮಾಡಲು ತಂಡ ನಿರ್ಧರಿಸಿದೆ. ಈಗ ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಈ ಸಿನಿಮಾ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.