ಚೆನ್ನೈ: ಮಹಾಮಾರಿ ಕೊರೊನಾದಿಂದಾಗಿ ಖ್ಯಾತ ಗಾಯಕ ಎಸ್ಪಿಬಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಸ್ವಲ್ಪ ಮಟ್ಟದ ಚೇತರಿಕೆ ಕಂಡು ಬಂದಿದೆ ಎಂದು ಮಗ ಚರಣ್ ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದಾಗ ಇದೀಗ ಅವರ ಶ್ವಾಸಕೋಶದಲ್ಲಿ ಚೇತರಿಕೆ ಕಾಣಿಸಿದ್ದು, ಮೊದಲ ಹಂತದಲ್ಲಿ ಗುಣಮುಖರಾಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
- https://www.facebook.com/587956369/posts/10157545100521370/?sfnsn=wiwspwa&extid=aPG5WgHvU8r3XLOm&d=w&vh=i
ಆಸ್ಪತ್ರೆಗೆ ಹೋಗಿ ವೈದ್ಯಕೀಯ ತಂಡದೊಂದಿಗೆ ನಾನು ಮಾತನಾಡಿದ್ದು, ಅವರು ತಂದೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ವೈದ್ಯರು ನೀಡುತ್ತಿರುವ ಚಿಕಿತ್ಸೆ ತಂದೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದು, ತಮ್ಮ ತಂದೆಯನ್ನ ಖುದ್ದಾಗಿ ಭೇಟಿಯಾಗಿರುವುದಾಗಿ ಎಸ್.ಪಿ ಚರಣ್ ತಿಳಿಸಿದ್ದಾರೆ. ನಮ್ಮ ತಂದೆ ನನ್ನೊಂದಿಗೆ ಮಾತನಾಡಲು ಪ್ರಯತ್ನಪಟ್ಟರು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಆಸ್ಪತ್ರೆಯ ಐಸಿಯುನಲ್ಲೇ ಸದ್ಯ ಕೂಡ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಮ್ಯೂಸಿಕ್ ಕೇಳುವ ಪ್ರಯತ್ನ ಸಹ ಮಾಡುತ್ತಿದ್ದಾರೆ ಎಂದು ಚರಣ್ ತಿಳಿಸಿದ್ದಾರೆ. ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ದ ಎಸ್ಪಿಬಿ ಅವರು ವೆಂಟಿಲೇಟರ್ ಇಸಿಎಂಒ ಸಪೋರ್ಟ್ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.
ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಕೂಡ ರಿಲೀಸ್ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ನೀಡಿದ್ದಾರೆ.