ಕಿರುತೆರೆಯಲ್ಲಿ ಯಶಸ್ವಿಯಾಗಿ ರಿಯಾಲಿಟಿ ಶೋಗಳನ್ನು ನಡೆಸಿಕೊಟ್ಟು ಸಕ್ಸಸ್ ಕಂಡಿರುವ ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ನಾಯಕನಾಗಿ ಅಭಿನಯಿಸಿ ನಿರ್ಮಾಣ ಮಾಡಿರುವ "ಎಲ್ಲಿದ್ದೆ ಇಲ್ಲಿ ತನಕ" ಚಿತ್ರದ ಆಡಿಯೋ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಹೊರವಲಯದಲ್ಲಿ ನಡೆದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗವಹಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.
ಎಲ್ಲಿದ್ದೆ ಇಲ್ಲಿತನಕ ಚಿತ್ರದ ಆಡಿಯೋವನ್ನು ಚಿತ್ರದಲ್ಲಿ ಕಾರ್ಯನಿರ್ವಹಿಸಿರುವ ಎಲ್ಲಾ ತಂತ್ರಜ್ಞರ ತಾಯಂದಿರು ಸೇರಿ ಈ ಚಿತ್ರದ ಆಡಿಯೋ ಬಿಡುಗಡೆ ಮಾಡಿ ತಮ್ಮ ಮಕ್ಕಳ ಹೊಸ ಪ್ರಯತ್ನದ ಚಿತ್ರಕ್ಕೆ ಶುಭ ಹಾರೈಸಿದರು. ರಂಗಭೂಮಿಯ ಹಿನ್ನೆಲೆ ಹೊಂದಿರುವ ತೇಜಸ್ವಿ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ಇದು ಅವರ ಮೊದಲ ನಿರ್ದೇಶನದ ಚಿತ್ರ. ಅಲ್ಲದೆ ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಈ ಚಿತ್ರದ ಮೂಲಕ ಸುಬ್ಬಯ್ಯನಾಯ್ಡು ಅವರ ಕುಟುಂಬದ ನಾಲ್ಕನೇ ತಲೆಮಾರು ಅಂದರೆ ಸೃಜನ್ ಲೋಕೇಶ್ ಪುತ್ರ ಸಹ ಈ ಚಿತ್ರದಲ್ಲಿ ಬಣ್ಣ ಹಚ್ಚಿರುವುದು ಸೌತ್ ಇಂಡಿಯಾದಲ್ಲಿ ಮೊದಲಾಗಿದೆ.
ಟಾಕಿಂಗ್ ಸೃಜನ್ ಲೋಕೇಶ್‌ಗೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಚಿತ್ರದ ಟೈಟಲ್ ಟ್ರ್ಯಾಕ್‌ನ ಭಾರತದ ಕಿರೀಟ ಕಾಶ್ಮೀರದಲ್ಲಿ ಶೂಟಿಂಗ್ ಮಾಡಿದ್ದು, ಶೂಟಿಂಗ್ ಮಾಡುವ ವೇಳೆ ತುಂಬಾ ಕಷ್ಟಗಳನ್ನು ಅನುಭವಿಸಿ ಶೂಟಿಂಗ್ ಕಂಪ್ಲೀಟ್ ಮಾಡಿಕೊಂಡು ಬಂದಿದ್ದೇವೆ. ಅಲ್ಲದೆ ಚಿತ್ರದ ಹಾಡುಗಳು ತುಂಬಾ ಚೆನ್ನಾಗಿ ಮೂಡಿ ಬಂದಿದ್ದು, ಈ ಚಿತ್ರ ಖಂಡಿತವಾಗಿಯೂ ಸಿನಿಪ್ರಿಯರಿಗೆ ಇಷ್ಟವಾಗುತ್ತೆ ಎಂಬುದು ಚಿತ್ರತಂಡದ ಮಾತು. ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ರೆ, ಸಾಹಿತಿ ಕವಿರಾಜ್ ಎರಡು ಹಾಡುಗಳನ್ನು ಬರೆದಿದ್ದಾರೆ. ಇದರ ಜೊತೆಗೆ ಅನುಭವಿ ಛಾಯಾಗ್ರಾಹಕ ವೇಣು ಅವರ ಕ್ಯಾಮೆರಾ ಕೈಚಳಕ ಚಿತ್ರದಲ್ಲಿದ್ದು ಹಿರಿಯ ನಟಿ ತಾರಾ, ಗಿರಿಜಾ ಲೋಕೇಶ್, ಅವಿನಾಶ್, ಉಮೇಶ್, ಸಾಧುಕೋಕಿಲ, ತರಂಗ, ವಿಶ್ವ, ಮಂಡ್ಯ ರಮೇಶ್ ಸೇರಿದಂತೆ ಬಹು ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.
ಈಗಾಗಲೇ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್‌ನಲ್ಲಿ ನಡೀತಿದ್ದು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಒಂದೊಂದೇ ಹಾಡನ್ನು ಲಾಂಚ್ ಮಾಡಿಕೊಂಡು ಭರ್ಜರಿ ಪ್ರಮೋಷನ್‌ನೊಂದಿಗೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ತಯಾರು ಮಾಡಿಕೊಂಡಿದೆ.