ಹೈದರಾಬಾದ್ : ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕ ನಾಗ್ ಅಶ್ವಿನ್ ಅವರು ತಮ್ಮ ಮುಂಬರುವ ಬಹುಭಾಷಾ ಚಿತ್ರಕ್ಕಾಗಿ ತಮ್ಮ ಕನಸಿನ ಪಾತ್ರವನ್ನು ಲಾಕ್ ಮಾಡಿದ್ದಾರೆ.
- " class="align-text-top noRightClick twitterSection" data="">
ಅಶ್ವಿನ್ ಅವರ ಮುಂದಿನ ಹೆಸರಿಡದ ಚಿತ್ರದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್, ಪ್ಯಾನ್-ಇಂಡಿಯಾ ಸ್ಟಾರ್ ಪ್ರಭಾಸ್ ಮತ್ತು ಗುಳಿಕೆನ್ನೆ ಚಲುವೆ ನಟಿ ದೀಪಿಕಾ ಪಡುಕೋಣೆ ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಚಲನಚಿತ್ರ ನಿರ್ದೇಶಕ ಚಿತ್ರದಲ್ಲಿ ನಟರಿಗಿಂತ ಅವರ ಪಾತ್ರಗಳು ಹೆಚ್ಚು ರೋಮಾಂಚನಗೊಳಿಸುತ್ತವೆ ಎಂದು ಹೇಳಿದ್ದಾರೆ.
ಪಿತ್ತ ಕಥಾಲು ಚಿತ್ರದ ಪ್ರಚಾರದ ವೇಳೆ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇದೊಂದು ಸ್ಟಾರ್ ನಟರೊಂದಿಗಿನ ಡ್ರೀಮ್ ಕಾಂಬಿನೇಷನ್ನಲ್ಲಿ ಮೂಡಿ ಬರುತ್ತಿರುವ ಚಿತ್ರವಾಗಿದೆ. ಚಿತ್ರದಲ್ಲಿ ಮೂರು ಜನರು ಮೂರು ಪಾತ್ರಗಳನ್ನು ಮಾಡುತ್ತಿದ್ದು, ನಟರಿಗಿಂತ ಕಥೆ ಹೆಚ್ಚು ರೋಮಾಂಚನಕಾರಿಯಾಗಿದೆ ಎಂದರು.
ಮಹಾನಟಿ ಖ್ಯಾತಿಯ ನಾಗ್ ಅಶ್ವಿನ್ ನಿರ್ದೇಶನದ ಬಹುಭಾಷಾ ಚಿತ್ರಕ್ಕೆ ದಕ್ಷಿಣ ಭಾರತದ ಪ್ರೊಡಕ್ಷನ್ ಹೌಸ್ ವೈಜಯಂತಿ ಮೂವೀಸ್ ಬಂಡವಾಳ ಹೂಡುತ್ತಿದೆ. ಮೊದಲ ಬಾರಿಗೆ ಪ್ರಭಾಸ್ ಬಿಗ್ ಬಿ ಮತ್ತು ದೀಪಿಕಾ ಒಟ್ಟಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರ 2022ರಲ್ಲಿ ಬಿಡುಗಡೆಯಾಗಲಿದೆ.